Advertisement

ಪವರ್‌ ಸೆಂಟರ್‌ ಇಲ್ಲ: ಡಿ.ಕೆ. ಶಿವಕುಮಾರ್‌

11:12 PM Mar 11, 2020 | Team Udayavani |

ಬೆಂಗಳೂರು: ಪಕ್ಷದಲ್ಲಿ ಪವರ್‌ ಸೆಂಟರ್‌ ಎನ್ನುವುದು ಇಲ್ಲ. ಇಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮಾಡಬೇಕು ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಬುಧವಾರ ವಿಧಾನಸೌಧದಲ್ಲಿ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನನ್ನ ಮೇಲೆ ದೊಡ್ಡ ನಂಬಿಕೆ ಇಟ್ಟು ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರುಗಳು ನನಗೆ ಈ ಜವಾಬ್ದಾರಿಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಕೈಯಲ್ಲಿ ಕೊಡಿಸಿದ್ದಾರೆ.

Advertisement

1975ರಲ್ಲೇ ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ. ರಾಜೀವ್‌ ಗಾಂಧಿ ಅವರು ನನ್ನನ್ನು ಗುರುತಿಸಿ ವಿಧಾನಸೌಧದಲ್ಲಿ ನೀನು ಇರಬೇಕು ಎಂದು ಪಕ್ಷದ ಟಿಕೆಟ್‌ ಕೊಟ್ಟಿದ್ದರು. ಅಲ್ಲಿಂದ ಇಲ್ಲಿಯವರೆಗೂ ಪಕ್ಷದ ಕಾರ್ಯಕರ್ತನಾಗಿ ದುಡಿಯುತ್ತ ಬಂದಿದ್ದೇನೆ. ಅಲ್ಲಿಂದ ಇಲ್ಲಿಯವರೆಗೆ ಶಾಸಕನಾಗಿ, ಮಂತ್ರಿಯಾಗಿ, ಪಕ್ಷದ ಕಾರ್ಯಾ ಧ್ಯಕ್ಷನಾಗಿ, ಇವತ್ತು ಅಧ್ಯಕ್ಷನಾಗಿ ಘೋಷಣೆಯಾಗಿ ದ್ದರೂ ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ. ಇವತ್ತೂ ಕಾರ್ಯಕರ್ತನೇ, ನಾಳೆಯೂ ಕಾರ್ಯಕರ್ತನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next