Advertisement

ಕಾಸರಗೋಡಿಗೆ ಸರ್ಕಾರಿ,  ಖಾಸಗಿ ಬಸ್ ಸಂಚಾರವಿಲ್ಲ:  ನಳೀನ್ ಕುಮಾರ್ ಕಟೀಲು

07:52 PM Jul 31, 2021 | Team Udayavani |

ಮಂಗಳೂರು: ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದುಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು.

Advertisement

ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ತೆ ವಹಿಸಿ ಮಾತನಾಡಿದರು.

ಇದನ್ನೂ ಓದಿ: ಕೋವಿಡ್ :ರಾಜ್ಯದಲ್ಲಿಂದು 1987 ಹೊಸ ಪ್ರಕರಣ ಪತ್ತೆ, 1632 ಸೋಂಕಿತರು ಗುಣಮುಖ

ಕೋವಿಡ್ ಪಾಸಿಟಿವಿಟಿ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿಯೂ ಹೆಚ್ಚಾಗುತ್ತಿದ್ದು, ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕೊರೊನಾ ಸೋಂಕು ಹರಡದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದರೊಂದಿಗೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ ಎಂದ ಅವರು, ಆಗಸ್ಟ್ 1 ರಿಂದ 7 ದಿನ ಮಂಗಳೂರಿನಿಂದ ಕೇರಳ ರಾಜ್ಯದ ಕಾಸರಗೋಡುಗೆ ಹೋಗುವ ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್‍ಗಳ ಸಂಚಾರವನ್ನು ನಿಲ್ಲಿಸಬೇಕು, ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳಲ್ಲಿ ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಇರಬೇಕು, ಮುಖ್ಯವಾಗಿ ಅಲ್ಲಿನ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ತಾವಿರುವ ವಿದ್ಯಾರ್ಥಿನಿಲಯಗಳಲ್ಲಿಯೇ ಒಂದು ವಾರ ಹೋಂ ಕ್ವಾರಂಟೈನ್‍ನಲ್ಲಿಯೇ ಇರಬೇಕು,  ಪ್ರತಿ ದಿನ ಅವರುಗಳ ಬಗ್ಗೆ ನಿಗಾ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು

Advertisement

Udayavani is now on Telegram. Click here to join our channel and stay updated with the latest news.

Next