Advertisement

Ramanagara ಜಿಲ್ಲೆಯ ಹೆಸರು ಬದಲಾವಣೆಯಿಂದ ತೊಂದರೆಯಿಲ್ಲ: ರಾಮಲಿಂಗಾ ರೆಡ್ಡಿ

03:55 PM Oct 27, 2023 | Team Udayavani |

ರಾಮನಗರ: ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಹೆಸರು ಮರುನಾಮಕರಣದ ವಿಚಾರ ನನಗೆ ಗೊತ್ತಿಲ್ಲ. ನನಗೆ ವೈಯಕ್ತಿಕವಾಗಿ ಡಿಕೆ ಶಿವಕುಮಾರ್ ಸಿಕ್ಕಿಲ್ಲ, ಚರ್ಚೆ ಮಾಡಿಲ್ಲ. ಹೆಸರು ಬದಲಾವಣೆ ಮಾಡುವುದರಿಂದ ಯಾವುದೇ ತೊಂದರೆ ಇಲ್ಲ. ಹೆಸರು ಬದಲಾವಣೆ ಮಾಡಿದ್ರೆ ಯಾವುದೇ ನಷ್ಟ ಆಗಲ್ಲ. ಜೊತೆಗೆ ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯಗಳು ಸಿಗಬೇಕು. ಆ ಉದ್ದೇಶದಿಂದ ಬದಲಾವಣೆ ಆದರೆ ತೊಂದರೆ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

Advertisement

ಸಿಎಂ, ಡಿಸಿಎಂ ಸೇರಿ ಎಲ್ಲಾ ಸಚಿವರು ಹಣ ತಿಂದಿಲ್ಲವೆಂದು ಪ್ರಮಾಣ ಮಾಡಲಿ ಎಂಬ ಎಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಹೇಳಿಕೆಗೆ ಮಾನ್ಯತೆ ನೀಡಬೇಕಿಲ್ಲ. ಚುನಾವಣೆ ಬಂದಾಗ ಯಾವ ಪಕ್ಷ ಅಧಿಕಾರದಲ್ಲಿರಬೇಕೆಂದು ಜನ ತೀರ್ಮಾನ ಮಾಡುತ್ತಾರೆ. ಕಳೆದ ಐದು ತಿಂಗಳ ಹಿಂದೆ ಜನ ನಿರ್ಧಾರ ಮಾಡಿ ನಮ್ಮನ್ನು ಆಯ್ಕೆ ಮಾಡಿದ್ದಾರೆ. ಈ ಆಣೆ-ಪ್ರಮಾಣದ ಬಗ್ಗೆ ನನಗೆ ನಂಬಿಕೆಯಿಲ್ಲ. ಅವರ ಸರ್ಕಾರ ಇದ್ದಾಗ ಅವರೇನು‌ ಮಾಡಿದ್ದಾರೆಂದು ಗೊತ್ತು. ನಮ್ಮ ಮೇಲೆ ಆರೋಪ ಮಾಡುವ ಬದಲು ಲೋಕಾಯುಕ್ತಕ್ಕೆ ದೂರು ಕೊಡಲಿ. ಇಲ್ಲ ಯಾವುದೇ ತನಿಖೆಗೆ ಒತ್ತಾಯ ಮಾಡಲಿ ಎಂದರು.

ಇದನ್ನೂ ಓದಿ:Tiger Claw Case: ಲಕ್ಷ್ಮೀ ಹೆಬ್ಬಾಳಕರ ಅಳಿಯನ ಪೆಂಡೆಂಟ್ ಅರಣ್ಯಾಧಿಕಾರಿಗಳ ವಶಕ್ಕೆ

ರಾಮನಗರಕ್ಕೆ ಬೆಂಗಳೂರಿನ ಕಸ ತರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಈ ವಿಚಾರ ನನಗೆ ಗೊತ್ತೇ ಇಲ್ಲ.! ನನ್ನ ಬಳಿ ಯಾರೂ ಚರ್ಚೆ ಮಾಡಿಲ್ಲ, ನನಗೆ ಮಾಹಿತಿ ಇಲ್ಲ. ನನ್ನ ಬಳಿ ಚರ್ಚೆ ಮಾಡದೆ ಇರುವುದನ್ನು ಹೇಗೆ ಮಾತನಾಡಲಿ. ಪತ್ರಿಕೆಗಳಲ್ಲಿ ಬಂದಿರುವುದು ಊಹಾಪೋಹ ಇರಬಹುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next