Advertisement

ಅಲ್ಪಸಂಖ್ಯಾತ ಸಚಿವಾಲಯ ರದ್ದು ವರದಿ : ಕೇಂದ್ರ ಸರಕಾರ ಸ್ಪಷ್ಟನೆ

03:36 PM Oct 03, 2022 | Team Udayavani |

ನವದೆಹಲಿ: ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಸರಕಾರ ಸೋಮವಾರ ಸ್ಪಷ್ಟಪಡಿಸಿದೆ.

Advertisement

ಕೇಂದ್ರವು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಪಡಿಸಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ವಿಲೀನಗೊಳಿಸುವ ಸಾಧ್ಯತೆಯಿದೆ ಎಂದು ಮಾಧ್ಯಮ ವರದಿಗೆ ಪ್ರತಿಕ್ರಿಯೆಯಾಗಿ ಈ ಸ್ಪಷ್ಟನೆ ಬಂದಿದೆ.

ಇದನ್ನೂ ಓದಿ : ಸಿಎಂ ಮಾನ್ ಜತೆ ‘ಸೆಲ್ಫಿ’: ಗುಜರಾತ್ ಬಿಜೆಪಿಯಿಂದ ಮಾಜಿ ವಕ್ತಾರ ಅಮಾನತು

ಅಂತಹ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಟ್ವೀಟ್‌ನಲ್ಲಿ ಸ್ಪಷ್ಟಪಡಿಸಿದೆ, ಇದನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರು ಮರು ಟ್ವೀಟ್ ಮಾಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next