Advertisement
ಈ ಕುರಿತು ಬುಧವಾರ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಕಳೆದ ವಾರ ಕಂದಾಯ ಸಚಿವರು, ಗೃಹ ಸಚಿವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಭೆ ನಡೆಯಿತು. ಸದ್ಯ ಕೋವಿಡ್ ಸೋಂಕು ಇಳಿಕೆಯಾಗಿದೆ. ಮುಂದಿ️ನ ದಿನಗಳಲ್ಲಿ ಎರಡನೇ ಅಲೆ ಭೀತಿ ಇದೆ. ಜತೆಗೆ ಚಳಿಗಾಲವೂ ಇದೆ. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಡಿಸೆಂಬರ್ 31ರಂದು ಮಧ್ಯರಾತ್ರಿ ನಗರದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್‌ಸ್ಟ್ರೀಟ್ ನಡೆಯುತ್ತಿದ್ದ ಸಂಭ್ರಮಾಚರಣೆಗಳು ಈ ವರ್ಷ ನಿಷೇಧಿಸಬೇಕು. ಸಾರ್ವಜನಿಕವಾಗಿ ಹೊಸ ವರ್ಷಾಚರಣೆಯ ಕಾರ್ಯಕ್ರಮಗಳನ್ನು ನಿಯಂತ್ರಿಸಬೇಕು. ಜತೆಗೆ ಬಾರ್, ಕ್ಲಬ್‌ಗಳಲ್ಲಿ ವಿಶೇಷ ಪಾರ್ಟಿ ಆಯೋಜಿಸಲು ಅನುಮತಿ ನೀಡಬಾರದು ಎಂಬ ಅಭಿಪ್ರಾಯವನ್ನು ನೀಡಿದ್ದೇವೆ ಎಂದರು.
Related Articles
Advertisement
ಹೊಸ ವರ್ಷ ಸಂಭ್ರಮಾಚರಣೆಗಳು ಸಂಪೂರ್ಣ ನಿಷೇಧಿಸಬೇಕು ಎಂದು ಸರ್ಕಾರಮಟ್ಟದ ಕೋವಿಡ್ ನಿರ್ವಹಣೆ ತಜ್ಞರ ತಾಂತ್ರಿಕ ಮಂಡಳಿ ಸರ್ಕಾರಕ್ಕೆ ಸಲಹೆ ನೀಡಿದೆ. ಡಿ.26 ರಿಂದ ಜ.2 ರವರೆಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುುಮತಿ ನೀಡಬಾರದು ಎಂದು ತಿಳಿಸಿದೆ. ಈ ಮೂಲಕ ಸಂಭ್ರಮಾಚರಣೆಗಳಿಗೆ ಸಂಪೂರ್ಣ ಬ್ರೇಕ್ ಬೀಳುವ ಸಾಧ್ಯತೆ ಹೆಚ್ಚಿದೆ.