Advertisement
ಶನಿವಾರ “ಕುಮಾರಕೃಪಾ’ ಅತಿಥಿಗೃಹದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ಬಂದಿದ್ದು, ವಾಸ್ತವಾಂಶ ಗೊತ್ತಿಲ್ಲ ಎಂದು ಭಾವಿಸುತ್ತೇನೆ. ಅವರು (ತಮಿಳುನಾಡಿನವರು) ಕೂಡ ನಮ್ಮ ಸಹೋದರರು. ಆ ಹಿನ್ನೆಲೆಯಲ್ಲಿ ನಾವು ಯುದ್ಧ ಮಾಡಲು ಆಗುವುದಿಲ್ಲ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕುಳಿತು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದರು.
ಈ ಹಿಂದೆ ಅನ್ಯ ಭಾಗ್ಯ ಯೋಜನೆಯಡಿ ಅಕ್ಕಿ ನೀಡಲಾಗದಿದ್ದರೆ ಹಣ ನೀಡಿ ಎಂದು ಹೇಳುತ್ತಿದ್ದ ಬಿಜೆಪಿ ನಾಯಕರು ಈಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ನೀಡಿ ಎಂದು ಹೇಳುತ್ತಿದ್ದಾರೆ. ಬಿಜೆಪಿ ನಾಯಕರು ಕೊಟ್ಟಿರುವ ಸಲಹೆಯಂತೆ ನಾವು ಹಣ ನೀಡಲು ನಿರ್ಧರಿಸಿದ್ದೇವೆ. ಆದರೆ ಈಗ ಅಕ್ಕಿ ವಿಚಾರವಾಗಿ ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಬಹಳ ಸಂತೋಷ. ಅವರು ಈ ವಿಚಾರದಲ್ಲಿ ಪ್ರತಿಭಟನೆ ಮಾಡಬೇಕು. ನಾವು ಅವರನ್ನು ತಡೆಯುವುದಿಲ್ಲ. ಅವರು ಹೋರಾಟದ ಮೂಲಕ ನಮ್ಮ ಯೋಜನೆಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಕುಟುಕಿದರು. ಶಿಸ್ತು ಸಮಿತಿ ಕ್ರಮ ಕೈಗೊಳ್ಳಲಿದೆ
ಚುನಾವಣೆ ಸಮಯದಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದವರ ಬಗ್ಗೆ ಕ್ರಮ ಜರಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಚುನಾವಣೆ ಸಮಯದಲ್ಲಿ ಯಾರು ಶಿಸ್ತು ಉಲ್ಲಂ ಸಿದ್ದಾರೋ ಅವರ ವಿರುದ್ಧ ಶಿಸ್ತು ಸಮಿತಿ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ಆಂತರಿಕ ಕಚ್ಚಾಟದ ಬಗ್ಗೆ ಮಾತನಾಡಿದ ಅವರು, ಬಿಜೆಪಿಯವರ ಬಾಯಿಗೆ ನಾವು ಹಿಂದೆಯೂ ಬೀಗ ಹಾಕಿಲ್ಲ. ಈಗಲೂ ಹಾಕುವುದಿಲ್ಲ. ಅವರ ಅನುಭವ, ನುಡಿಮುತ್ತುಗಳನ್ನು ಜನರಿಗೆ ತಿಳಿಸುತ್ತಿದ್ದಾರೆ ಎಂದರು.