Advertisement

ಸಿಎಂ ಬದಲಿಸುವ ಪ್ರಶ್ನೆಯೇ ಇಲ್ಲ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

07:22 PM Aug 12, 2022 | Team Udayavani |

ನವದೆಹಲಿ: ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ, ಬಸವರಾಜ ಬೊಮ್ಮಾಯಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಶುಕ್ರವಾರ ಹೇಳಿಕೆ ನೀಡಿದ್ದಾರೆ.

Advertisement

ರೈತರ ಪರವಾಗಿ, ಯುವ ಸಮೂಹದ ಪರವಾಗಿ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ಕಾಮನ್ ಮ್ಯಾನ್ ಸಿಎಂ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ. 100% ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ. 150 ಕ್ಷೇತ್ರಗಳಲ್ಲಿ ಗೆದ್ದು ಪೂರ್ಣ ಪ್ರಮಾಣದಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬರಲಿದ್ದೇವೆ ಎಂದರು.

ಸಿಎಂ ಬದಲಾವಣೆ ಎನ್ನುವುದು ಕಾಂಗ್ರೆಸ್ ಷಡ್ಯಂತ್ರ. ಕಾಂಗ್ರೆಸ್ ಗೊಂದಲ ಹುಟ್ಟು ಹಾಕುತ್ತಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಒಡಕನ್ನು ಮುಚ್ಚಿ ಹಾಕಲು ಸಿಎಂ ಬದಲಾವಣೆ ವಿಚಾರ ಹುಟ್ಟು ಹಾಕಿದ್ದಾರೆ. ಕಾಂಗ್ರೆಸ್ ನಾಯಕರೇ ಇಲ್ಲದ ಪಕ್ಷ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next