Advertisement

ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ: ಕಾರಜೋಳ ಸ್ಪಷ್ಟನೆ

03:44 PM Jan 11, 2021 | Team Udayavani |

ಗದಗ: ಯಡಿಯೂರಪ್ಪ ಅವರ ನೇತೃತ್ವದಲ್ಲೇ ಸರಕಾರ ಪೂರ್ಣಗೊಳ್ಳಲಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸ್ಪಷ್ಟಡಿಸಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯ ಸರಕಾರ ಅನೇಕ  ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಕೊರೊನಾ ಮತ್ತು ಪ್ರವಾಹ ಪರಿಸ್ಥಿತಿಯನ್ನು ಸರಕಾರ ಸಮರ್ಥವಾಗಿ ನಿಭಾಯಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲೇ ಇನ್ನೂ ಎರಡೂವರೆ ವರ್ಷ ಸರಕಾರ ಸಭದ್ರವಾಗಿ ನಡೆಯಲಿದೆ ಎಂದರು.

ಇದನ್ನೂ ಓದಿ:ಜನವರಿ 15ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌, ಡಿಪ್ಲೊಮಾ ಆಫ್‌ಲೈನ್‌ ತರಗತಿ ಆರಂಭ

ಪಕ್ಷದಲ್ಲೂ ಯಾವುದೇ ಗೊಂದಲಗಳಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಮುಖ್ಯಮಂತ್ರಿಗಳ ಬದಲಾವಣೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ. ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಯಾವುದೇ ಗೊಂದಲಗಳಿಲ್ಲದೇ ಪುಟ ವಿಸ್ತರಣೆ ಆಗಲಿದೆ. ಈ ಕುರಿತು ಮುಖ್ಯಮಂತ್ರಿಗಳ ಹೇಳಿಕೆಯಂತೆ ಎರಡು ದಿನಗಳು ಕಾದು ನೋಡಿ ಎಂದಷ್ಟೇ ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಕಳಕಪ್ಪ ಬಂಡಿ ಮತ್ತಿತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next