ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂದಿನ ಚುನಾವಣೆಯಲ್ಲಿ ತಮ್ಮ ಶಿಗ್ಗಾವಿ ಕ್ಷೇತ್ರ ತೊರೆದು ಬೇರೆ ಜಿಲ್ಲೆಯಲ್ಲಿ ಕಣಕ್ಕಿಳಿಯುತ್ತಾರೆ ಎಂಬ ಉಹಾಪೋಹಗಳಿಗೆ ಸ್ವತಃ ಸಿಎಂ ಬೊಮ್ಮಾಯಿ ಇಂದು ತೆರೆ ಎಳೆದಿದ್ದಾರೆ.
ಇಂದು ಸವಣೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, “ಶಿಗ್ಗಾವಿ ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದರು.
“ಮೂರು ಬಾರಿ ಶಿಗ್ಗಾವಿ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದಾರೆ. ಅತೀ ಹೆಚ್ಚು ಪ್ರೀತಿ ತೋರಿಸಿದ್ದಾರೆ. ಬೇರೆ ಕಡೆ ಹೋಗುವ ಪ್ರಶ್ನೆಯೇ ಇಲ್ಲ” ಎಂದರು.
ಇದನ್ನೂ ಓದಿ:ಕೇರಳದ ರಾಜರಾಜೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಹೆಚ್ ಡಿಕೆ
ನಾಲ್ಕು ರಾಜ್ಯಗಳ ಚುನಾವಣೆ ಬಳಿಕ ಹೊಸ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. 2024ರ ಲೋಕಸಭೆ ಚುನಾವಣೆಯ ದಿಕ್ಸೂಚಿಯಿದು. ರಾಜ್ಯದಲ್ಲೂ ಕೂಡ ದೊಡ್ಡ ಪ್ರಮಾಣದಲ್ಲಿ ಬಿಜೆಪಿಗೆ ಬೆಂಬಲ ಸಿಗಲಿದೆ, 2024ರಲ್ಲಿ ಮತ್ತೆ ಸ್ವಂತ ಶಕ್ತಿಯ ಮೇಲೆ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗುತ್ತೇವೆ ಎಂದರು.