Advertisement

“ಸಭಾಧ್ಯಕ್ಷರ ನಿರ್ಧಾರ ಪ್ರಶ್ನಿಸುವುದು ಬೇಡ’

11:33 PM Oct 11, 2019 | Team Udayavani |

ವಿಧಾನ ಪರಿಷತ್‌: “ಮಾಧ್ಯಮ ನಿರ್ಬಂಧ ವಿಚಾರವಾಗಿ ವಿಧಾನಸಭೆಯ ಸಭಾಧ್ಯಕ್ಷರು ತೆಗೆದುಕೊಂಡ ನಿರ್ಧಾರವನ್ನು ವಿಧಾನ ಪರಿಷತ್‌ನಲ್ಲಿ ಪ್ರಶ್ನೆ ಮಾಡುವುದು ಬೇಡ’ ಎಂದು ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸದಸ್ಯರಿಗೆ ಮನವಿ ಮಾಡಿದರು. ಕಲಾಪದ ಆರಂಭದಲ್ಲಿ ಕಾಂಗ್ರೆಸ್‌ನ ಪ್ರಕಾಶ್‌ ರಾಥೋಡ್‌ ನೆರೆ ವಿಚಾರವಾಗಿ ವಿಷಯ ಮಂಡನೆ ಮಾಡಿ, “ವಿಧಾನ ಸಭೆಯಲ್ಲಿ ಮಾಧ್ಯಮದವರಿಗೆ ನಿರ್ಬಂಧ ಹೇರುವ ಮೂಲಕ ಪತ್ರಿಕಾ ಸ್ವಾತಂತ್ರ್ಯದ ಹರಣ ಮಾಡಿದ್ದಾರೆ.

Advertisement

ಸಂವಿಧಾನದಲ್ಲಿ ನೀಡಿರುವ ಅಧಿಕಾರವನ್ನು ಸ್ಪೀಕರ್‌ ಮೊಟಕುಗೊಳಿಸುತ್ತಿದ್ದಾರೆ’ ಎಂದು ಹೇಳುತ್ತಿದ್ದಂತೆ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಪ್ರತಿಪಕ್ಷದ ನಾಯಕ ಎಸ್‌.ಆರ್‌.ಪಾಟೀಲ್‌ ಮಾತನಾಡಿ, ರಾಥೋಡ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಂವಿಧಾನದಲ್ಲಿರುವ ಸ್ವಾತಂತ್ರ್ಯದ ಹರಣ ಮಾಡುವುದು ಸರಿಯಲ್ಲ ಎಂದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ಸ್ಪೀಕರ್‌ ನಿರ್ಧಾರದ ವಿಚಾರವಾಗಿ ಜ್ಞಾನೋದಯ ಎಂಬ ಪದ ಬಳಕೆ ಸರಿಯಲ್ಲ. ಅದನ್ನು ಕಡತದಿಂದ ತೆಗೆದು ಹಾಕಬೇಕು ಎಂದು ಕೋರಿದರು.

ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿ, ಹಿಂದೊಮ್ಮೆ ಸ್ಪೀಕರ್‌ ಒಬ್ಬರು ಮೇಲ್ಮನೆ ವಿಸರ್ಜನೆ ಬಗ್ಗೆಯೂ ಮಾತನಾಡಿದ್ದರು. ಅದರ ಬಗ್ಗೆ ಇಲ್ಲಿ ಚರ್ಚೆ ನಡೆದಿಲ್ಲವೇ? ವಿಷಯ ಪ್ರಸ್ತಾವನೆಯಲ್ಲಿ ತಪ್ಪೇನಿದೆ ಎಂದು ಕಾಂಗ್ರೆಸ್‌ ಸದಸ್ಯರಿಗೆ ಬೆಂಬಲ ನೀಡಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಗ್ವಾದ ತಾರಕಕ್ಕೇರುತ್ತಿದ್ದಂತೆ ಮಧ್ಯ ಪ್ರವೇಶ ಮಾಡಿದ ಸಭಾಪತಿ ಪ್ರತಾಪ್‌ ಚಂದ್ರಶೆಟ್ಟಿ, ಈ ವಿಚಾರದ ಚರ್ಚೆಯನ್ನು ಮುಂದುವರಿಸುವುದು ಬೇಡ ಎಂದು ತೆರೆ ಎಳೆದರು.

Advertisement

Udayavani is now on Telegram. Click here to join our channel and stay updated with the latest news.

Next