Advertisement

CBSE 10ನೇ ತರಗತಿ ಮರುಪರೀಕ್ಷೆ ಇಲ್ಲ

09:40 AM Apr 04, 2018 | Team Udayavani |

ಹೊಸದಿಲ್ಲಿ: 10ನೇ ತರಗತಿ CBSE ಗಣಿತ ವಿಷಯದ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮಂಗಳವಾರ ಸ್ಪಷ್ಟಪಡಿಸಿದೆ. 10ನೇ ತರಗತಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಬಂದಿರುವ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವ ಬಗ್ಗೆ ಪರಿಶೀಲಿಸುವುದಾಗಿ ಸಚಿವಾಲಯ ಹೇಳಿತ್ತು. ಆದರೆ ಮಕ್ಕಳ ಹಿತದೃಷ್ಟಿಯಿಂದ ಮರುಪರೀಕ್ಷೆ ನಡೆಸುವುದಿಲ್ಲ. ದೆಹಲಿ ಮತ್ತು ಹರ್ಯಾಣಗಳಲ್ಲೂ ಮರುಪರೀಕ್ಷೆ ನಡೆಸುವುದಿಲ್ಲ ಎಂದು ಸಚಿವಾಲಯ ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next