Advertisement

ಮರಾಠಿ ಭಾಷೆಗೂ ಪ್ರಾಧಿಕಾರಕ್ಕೂ ಸಂಬಂಧ ಇಲ್ಲ: ಯಡಿಯೂರಪ್ಪ

10:03 PM Nov 17, 2020 | mahesh |

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕನ್ನಡ ಪರ ಸಂಘಟನೆಗಳು ಸೇರಿದಂತೆ ನಾನಾ ವಲಯದಿಂದ ಪ್ರತಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮರಾಠಿ ಭಾಷೆಗೂ ಪ್ರಾಧಿಕಾರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿ ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ.

Advertisement

ಈ ಬಗ್ಗೆ ಮಂಗಳವಾರ ಟ್ವೀಟ್‌ ಮಾಡಿರುವ ಯಡಿಯೂರಪ್ಪ, “ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ’ ಎಂದು ಹೇಳಿದ್ದಾರೆ.

“ಮರಾಠ ಜನಾಂಗದವರು ತಲತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next