Advertisement

ಮೋದಿ ಉಪನಾಮ ಪ್ರಕರಣ: ರಾಹುಲ್‌ ಗಾಂಧಿ ಅರ್ಜಿ ವಜಾ

12:45 AM May 04, 2023 | Team Udayavani |

ರಾಂಚಿ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಮೋದಿ ಉಪನಾಮ ಪ್ರಕರಣದಲ್ಲಿ ಮತ್ತೆ ಹಿನ್ನಡೆಯಾಗಿದೆ. ಝಾರ್ಖಂಡ್‌ನ‌ ವಿಶೇಷ ಕೋರ್ಟ್‌ನಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಹಾಜರಾತಿಯಿಂದ ವಿನಾಯತಿ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

Advertisement

“ಮಧ್ಯಾಂತರ ರಕ್ಷಣೆಯನ್ನು ಈ ಹಂತದಲ್ಲಿ ನೀಡಲು ಸಾಧ್ಯವಿಲ್ಲ. ಹೀಗಾಗಿ ಅರ್ಜಿ ವಜಾಗೊಳಿಸಲಾಗಿದೆ,’ ಎಂದು ನ್ಯಾಯಪೀಠ ಹೇಳಿದೆ. ಕರ್ನಾಟಕದ ಕೋಲಾರದಲ್ಲಿ 2019ರಲ್ಲಿ ನಡೆದ ಕಾಂಗ್ರೆಸ್‌ ಪ್ರಚಾರ ರ್ಯಾಲಿ ವೇಳೆ “ಎಲ್ಲ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿರುತ್ತದೆ?’ ಎಂದು ಕೇಳಿದ್ದರ ವಿರುದ್ಧ ರಾಂಚಿಯಲ್ಲಿ ದೂರು ದಾಖಲಿಸಿದ್ದರು. ಮಂಗಳವಾರ ಗುಜರಾತ್‌ ಹೈಕೋರ್ಟ್‌ನಲ್ಲಿ ಮಧ್ಯಾಂತರ ತಡೆಯಾಜ್ಞೆ ಕೋರಿದ್ದ ಅರ್ಜಿಯೂ ತಿರಸ್ಕೃತಗೊಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next