Advertisement
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆಯ ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ ಉಚಿತವಾಗಿ ಪಡಿತರ ವಿತರಿಸುವಂತೆ ಎಪಿಎಲ್ ಕಾರ್ಡ್‌ದಾರರಿಗೂ ನಿರ್ದಿಷ್ಟ ದರದಲ್ಲಿ ನಿರ್ದಿಷ್ಟ ಪ್ರಮಾಣದ ಅಕ್ಕಿಯನ್ನು ಪ್ರತೀ ತಿಂಗಳು ವಿತರಣೆ ಮಾಡಲಾಗುತ್ತದೆ.ಆದರೆ ಸೆಪ್ಟಂಬರ್‌ನಿಂದ ಉಭಯ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಸರಿಯಾಗಿ ಅಕ್ಕಿ ಪೂರೈಕೆಯಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ.
ಎಪಿಎಲ್ ಕಾರ್ಡ್ ಹೊಂದಿದ ಎಲ್ಲರಿಗೂ ಅಕ್ಕಿ ನೀಡಲಾಗುವುದಿಲ್ಲ. ಯಾರು ತಮಗೆ ಅಕ್ಕಿ ಬೇಕು ಎಂದು ಮುಂಚಿತವಾಗಿ ತಿಳಿಸಿರುತ್ತಾರೋ ಅಂಥವರಿಗೆ ಮಾತ್ರ ವಿತರಣೆ ಮಾಡಲಾಗುತ್ತದೆ. ಸಮಸ್ಯೆಯನ್ನು ಮೇಲಧಿಕಾರಿ ಗಳ ಗಮನಕ್ಕೂ ತಂದಿದ್ದೇವೆ.ಶೀಘ್ರ ಪರಿಹಾರ ಸಿಗಲಿದೆ ಎಂದು ಫುಡ್ ಇನ್‌ಸ್ಪೆಕ್ಟರ್‌ಗಳು ಮಾಹಿತಿ ನೀಡಿದರು. ಶೀಘ್ರ ಪೂರೈಕೆ: ಎಪಿಎಲ್ ಕಾರ್ಡ್‌ದಾರರಿಗೆ ಪಡಿತರ ವ್ಯವಸ್ಥೆಯಡಿ ಅಕ್ಕಿ ವಿತರಣೆ ಬೇಕಾದಷ್ಟು ಅಕ್ಕಿಯ ದಾಸ್ತಾನು ಇಲ್ಲದೇ ಕೊರತೆ ಆಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ರಾಜ್ಯ ಮಟ್ಟದ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಶೀಘ್ರವೇ ಪೂರೈಕೆಯಾಗುವ ಸಾಧ್ಯತೆಯಿದೆ. ಫುಡ್ ಕಾರ್ಪೊರೇಶನ್ ಆಫ್ ಇಂಡಿಯಾದಿಂದ ಬಂದ ತತ್‌ಕ್ಷಣ ದಿಂದಲೇ ಪೂರೈಕೆ ಪ್ರಕ್ರಿಯೆ ಪುನರ್ ಆರಂಭಿಸಲಾಗುವುದು ಎಂದು ಇಲಾಖೆಯ ದ.ಕ. ಜಿಲ್ಲೆಯ ಉಪನಿರ್ದೇಶಕರಾದ ಎನ್. ಮಾಣಿಕ್ಯ, ಉಡುಪಿ ಜಿಲ್ಲೆಯ ಉಪನಿರ್ದೇಶಕರಾದ ಮೊಹಮ್ಮದ್ ಇಸಾಕ್ ಮಾಹಿತಿ ನೀಡಿದರು.