Advertisement

ಮದರಸಾ ವಿದ್ಯಾರ್ಥಿಗಳಿಗೆ ಇನ್ನು ಸ್ಕಾಲರ್‌ಶಿಪ್‌ ಇಲ್ಲ

05:37 PM Nov 28, 2022 | Team Udayavani |

ಲಕ್ನೋ: ಉತ್ತರಪ್ರದೇಶದ ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳು ಇನ್ನು ಮುಂದೆ ಸ್ಕಾಲರ್‌ಶಿಪ್‌ಗೆ ಅರ್ಜಿ ಹಾಕುವಂತಿಲ್ಲ ಎಂದು ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ.

Advertisement

ಈವರೆಗೆ ಬೇರೆ ಬೇರೆ ಕೋರ್ಸ್‌ಗಳಿಗೆ ಅನುಗುಣವಾಗಿ 1ರಿಂದ 5ನೇ ತರಗತಿವರೆಗಿನ ಮದರಸಾ ವಿದ್ಯಾರ್ಥಿಗಳಿಗೆ 1 ಸಾವಿರ ರೂ.ಗಳ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು. ಕಳೆದ ವರ್ಷ 16.558 ಮದರಸಾಗಳ 5 ಲಕ್ಷದಷ್ಟು ಮಕ್ಕಳು ಈ ಸ್ಕಾಲರ್‌ಶಿಪ್‌ ಪಡೆದಿದ್ದರು.

ಆದರೆ, ಈಗ ವಿದ್ಯಾರ್ಥಿವೇತನವನ್ನು ಸ್ಥಗಿತಗೊಳಿಸಿರುವ ಕೇಂದ್ರ ಸರ್ಕಾರ, “1ರಿಂದ 8ರವರೆಗಿನ ಶಿಕ್ಷಣವನ್ನು ಶಿಕ್ಷಣ ಹಕ್ಕು ಕಾಯ್ದೆಯಡಿ ಉಚಿತವಾಗಿ ಒದಗಿಸಲಾಗುತ್ತಿದೆ. ಮಧ್ಯಾಹ್ನದ ಬಿಸಿಯೂಟ ಮತ್ತು ಪುಸ್ತಕಗಳೂ ಉಚಿತವಾಗಿ ನೀಡಲಾಗುತ್ತಿದೆ.

ಹೀಗಿರುವಾಗ, ವಿದ್ಯಾರ್ಥಿವೇತನ ನೀಡಬೇಕಾದ ಅಗತ್ಯವಿಲ್ಲ’ ಎಂದಿದೆ. ಕೇವಲ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ದೊರೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next