ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಯಶಸ್ವಿಯಾಗಿ ದ್ವಿತೀಯ ಪಿಯುಸಿ ಭೌತಿಕ ತರಗತಿ ಆರಂಭವಾಗಿದ್ದರೂ ಉಳಿದ ತರಗತಿ ಆರಂಭದ ಬಗ್ಗೆ ಜಿಲ್ಲಾಡಳಿತ ಇನ್ನೂ ಅಂತಿಮ ತೀರ್ಮಾನ ಮಾಡಿಲ್ಲ. ಹೀಗಾಗಿ ಸೆ. 6ರಿಂದ 6ರಿಂದ 8ನೇ ತರಗತಿ ಆರಂಭಿಸಲು ರಾಜ್ಯ ಸರಕಾರ ಅನುಮತಿ ನೀಡಿದ್ದರೂ ಇದು ದ.ಕ. ಜಿಲ್ಲೆಗೆ ಅನ್ವಯಿಸುವುದಿಲ್ಲ.
“ಉದಯವಾಣಿ’ ಜತೆಗೆ ಮಾತನಾಡಿದ ಜಿ.ಪಂ. ಸಿಇಒ ಡಾ| ಕುಮಾರ್, “ಜಿಲ್ಲೆಯಲ್ಲಿ 6ರಿಂದ 8ನೇ ತರಗತಿ ತನಕದ ತರಗತಿಗಳನ್ನು ಆರಂಭಿಸುವ ಕುರಿತು ಈವರೆಗೆ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ. 9 ಮತ್ತು 10ನೇ ತರಗತಿ ಕೂಡ ಸದ್ಯ ಆರಂಭವಾಗುತ್ತಿಲ್ಲ. ಕೊರೊನಾ ಪಾಸಿಟಿವಿಟಿ ದರ ಕಡಿಮೆ ಆಗುತ್ತಿದ್ದರೆ ಅದರ ಆಧಾರದಲ್ಲಿ ಕೆಲವೇ ದಿನದಲ್ಲಿ ಸಭೆ ನಡೆಸಿ ಶಾಲಾರಂಭದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.
ಉಡುಪಿಯಲ್ಲಿ ಇಂದಿನಿಂದ :
ಉಡುಪಿ ಜಿಲ್ಲೆಯಾದ್ಯಂತ 6ರಿಂದ 8ನೇ ತರಗತಿ ಗಳು ಸೋಮವಾರದಿಂದ (ಸೆ. 6) ಆರಂಭಗೊಳ್ಳಲಿವೆ. ಇದಕ್ಕಾಗಿ ತರಗತಿಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿ ಸಿದ್ಧಪಡಿಸಿಡಲಾಗಿದೆ.
ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಶಾಲೆಗಳಿಗೆ ತೆರಳಿ ಕೊರೊನಾ ಮಾರ್ಗಸೂಚಿಗಳ ಪಾಲನೆ ಆಗುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಡಿಡಿಪಿಐ ಎನ್.ಎಚ್. ನಾಗೂರ ತಿಳಿಸಿದ್ದಾರೆ.