Advertisement

Madhu Bangarappa ಈ ವರ್ಷ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ

09:11 PM May 28, 2024 | Team Udayavani |

ಮೈಸೂರು: ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯಪುಸ್ತಕದ ಪರಿಷ್ಕರಣೆ ಇಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

Advertisement

ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೆಲವು ವ್ಯಾಕರಣ, ಪದಗಳನ್ನಷ್ಟೇ ಬದಲಾವಣೆ ಮಾಡಲಾಗಿದೆ. ಅದು ಬಿಟ್ಟರೆ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದರು.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 500 ಕರ್ನಾಟಕ ಪಬ್ಲಿಕ್‌ ಶಾಲೆ ಆರಂಭಿಸುತ್ತೇವೆ. ಮುಂದಿನ 3 ವರ್ಷಗಳಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್‌ ಶಾಲೆ ಆರಂಭಿಸುವ ಗುರಿ ಹೊಂದಿರುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ಸಿಎಸ್‌ಆರ್‌ ಅನುದಾನದಡಿ ಪಬ್ಲಿಕ್‌ ಶಾಲೆ ಆರಂಭಿಸಲಿದ್ದೇವೆ. ರಾಜ್ಯದಲ್ಲಿ 6 ಸಾವಿರ ಗ್ರಾಮ ಪಂಚಾಯಿತಿಗಳಿವೆ. 2 ಪಂಚಾಯಿತಿಗೆ ಒಂದರಂತೆ 1 ಕರ್ನಾಟಕ ಪಬ್ಲಿಕ್‌ ಶಾಲೆ ಆರಂಭಿಸಲಾಗುವುದು ಎಂದರು.

ಕರ್ನಾಟಕ ಪಬ್ಲಿಕ್‌ ಶಾಲೆಗಳ ಆರಂಭಕ್ಕೆ 2 ಸಾವಿರ ಕೋಟಿ ಅನುದಾನ ಬೇಕಾಗುತ್ತದೆ. ಸಿಎಸ್‌ಆರ್‌ ಅನುದಾನದಡಿ 2500 ಸಾವಿರ ಕೋಟಿ ಹಣವನ್ನು ಕೊಡಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಎಲ್ಲ ಸೌಕರ್ಯದೊಂದಿಗೆ ನಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಶೂ ಕೊಡ್ತೀವಿ, ಸೈಕಲ್‌ ವಿತರಣೆ ತೀರ್ಮಾನವಾಗಿಲ್ಲ:
ಬುಧವಾರ (ಮೇ 29)ದಿಂದ ಶಾಲೆಗಳು ಪ್ರಾರಂಭವಾಗಲಿದ್ದು ಶಿಕ್ಷಕರು ಮಕ್ಕಳ ಸ್ವಾಗತಕ್ಕೆ ಸಿದ್ಧರಾಗಿದ್ದಾರೆ. ಈಗಾಗಲೇ ಶೇ. 95 ಸಮವಸ್ತ್ರ ಮತ್ತು ಪಠ್ಯ ಪುಸ್ತಕ ವಿತರಣೆ ಮಾಡಲಾಗಿದೆ. ಸಮವಸ್ತ್ರದಲ್ಲಿ ಗುಣಮಟ್ಟದಲ್ಲಿ ಕೊರತೆ ಇದ್ದರೆ ದೂರು ಕೊಡಬಹುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶೂ ಖರೀದಿಗೆ ಎಸ್‌ಡಿ ಎಂಸಿ ಅಧ್ಯಕ್ಷರಿಗೆ ಜವಾಬ್ದಾರಿ ಕೊಟ್ಟಿರುವುದರಿಂದ 15 ದಿನಗಳ ಒಳಗೆ ಶೂ ಖರೀದಿಸಿ ನೀಡುತ್ತಾರೆ. ಶೈಕ್ಷಣಿಕ ಸಾಲಿನಲ್ಲಿ ಸೈಕಲ್‌ ವಿತರಿಸುವ ಬಗ್ಗೆ ತೀರ್ಮಾನವಾಗಿಲ್ಲ ಎಂದರು. ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಲ್ಲ ಮಕ್ಕಳಿಗೆ ವಾರದಲ್ಲಿ 2 ಬಾರಿ ಮೊಟ್ಟೆ, ರಾಗಿ ಮಾಲ್ಟ್ ನೀಡಿ ಪೌಷ್ಟಿಕತೆ ಹೆಚ್ಚಿಸಲಾಗುತ್ತಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next