Advertisement

ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಯಾವುದೇ ಮಠಾಧೀಶರು ಚರ್ಚೆ ಮಾಡಿಲ್ಲ: ಸಿಎಂ ಬೊಮ್ಮಾಯಿ

10:38 AM Feb 26, 2023 | Team Udayavani |

ಹುಬ್ಬಳ್ಳಿ: ಮಠಾಧೀಶರು ಚುನಾವಣಾ ಅಖಾಡಕ್ಕಿಳಿಯುವ ವಿಚಾರವಾಗಿ ಇದುವರೆಗೂ ಯಾವುದೇ ಮಠಾಧೀಶರು ನನ್ನನ್ನು ಸಂಪರ್ಕಿಸಿಲ್ಲ, ಚರ್ಚಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ರವಿವಾರ ತಮ್ಮ ನಿವಾಸ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಾಧೀಶರು ಚುನಾವಣಾ ಕಣಕ್ಕಿಳಿಯುತ್ತಾರೆ ಎಂಬ ಬಗ್ಗೆ ಏನೂ ಹೇಳಲಾಗಲ್ಲ ಎಂದರು.

ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅರ್ಕಾವತಿ ಹಗರಣ ಸಿಬಿಐ ತನಿಖೆಗೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿಬಿಐ ತನಿಖೆ ಬಗ್ಗೆ ಯಾರು ಹೇಳಿದ್ದು. ಈ ಹಗರಣದ ಬಗ್ಗೆ ಕಮಿಷನ್ ವರದಿ ಕೊಟ್ಟಿದೆ. ಮುಂದೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ. ನಾವು ಸಂಪುಟದಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಸಿದ್ಧರಾಮಯ್ಯ ತಾವೇ ಸುಳ್ಳಿನ ಸುಳಿಯಲ್ಲಿ ಸಿಲುಕುತ್ತಿದ್ದಾರೆ. ಅವರು ಹೇಳಿರುವ ಸುಳ್ಳು ಒಂದೊಂದಾಗಿ ಹೊರಬರುತ್ತಿವೆ. ಅವರು ಪ್ರಣಾಳಿಕೆಯಲ್ಲಿ ಘೋಷಿಸಿರುವ ಭರವಸೆಗಳ ಕುರಿತು ವಿಧಾನಸಭೆ ಅಧಿವೇಶನದಲ್ಲಿಯೇ ಹೇಳಿದ್ದೇ‌ನೆ. ಇನ್ನೊಬ್ಬರ ಬಗ್ಗೆ ಸಾವಿರ ಬಾರಿ ಸುಳ್ಳು ಹೇಳಿದರೆ ಅದು ಸತ್ಯವಾಗುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಸತ್ಯ ಸತ್ಯವೇ. ಸುಳ್ಳು ಸುಳ್ಳೆ. ಅವರು ಹೇಳಿದ ತಕ್ಷಣ ಸುಳ್ಳು ಸತ್ಯವಾಗುವುದಿಲ್ಲ, ಸತ್ಯ ಸುಳ್ಳಾಗುವುದಿಲ್ಲ. ಆದರೆ ಅತಿಯಾದ ಸುಳ್ಳು ಹೇಳಿದ ಮೇಲೆ ಸುಳ್ಳೇ ಸತ್ಯ ಅಂತ ಅವರಿಗೆ ನಂಬಿಕೆ ಬರಲಾರಂಭಿಸಿದೆ. ಸುಳ್ಳಿನ ಸುಳಿಯಲ್ಲಿ ಕಾಂಗ್ರೆಸ್ ಸಿಕ್ಕಿಹಾಕಿಕೊಳ್ಳುತ್ತದೆ ಎಂದು ಕುಟುಕಿದರು

7ನೇ ವೇತನ ಆಯೋಗ ಜಾರಿಗಾಗಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಈಗಾಗಲೇ ಅವರ ಜೊತೆ ಚರ್ಚಿಸಿದ್ದೇನೆ. ನಿರಂತರ ಸಂಪರ್ಕದಲ್ಲಿದ್ದೇನೆ ಎಂದರು.

Advertisement

ಇದನ್ನೂ ಓದಿ:ಗೋರಕ್ಷಣೆ ಹೆಸರನಲ್ಲಾಗುವ ಹತ್ಯೆಗಳ ವಿರುದ್ಧ ನಮ್ಮ ಧ್ವನಿ ಇನ್ನಷ್ಟು ಗಟ್ಟಿಯಾಗಬೇಕು: ತರೂರ್

ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ವಿಚಾರವಾಗಿ, ಅವರು ಸಕ್ರಿಯ ರಾಜಕಾರಣದಿಂದ ದೂರವಾಗಲ್ಲ. ಈ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯನ್ನು ಅವರು ಮತ್ತಷ್ಟು ಬಲಪಡಿಸುತ್ತಾರೆ. ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ಮಾತನಾಡಲ್ಲ ಎಂದರು.

ಪ್ರಧಾನಿ ಮೋದಿ ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಗಾವಿಯಲ್ಲಿ ರೋಡ್ ಶೋ, ಕಿಸಾನ್ ಸಮ್ಮಾನ್ ಕಾರ್ಡ್ ಬಿಡುಗಡೆ ಎರಡೂ ಕಡೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಧರ್ಮೇಂದ್ರ ಪ್ರಧಾನ್, ಅಮಿತ್ ಶಾ ರಾಜ್ಯದಲ್ಲಿಯೇ ಮನೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇಬ್ಬರೂ ರಾಜ್ಯದಲ್ಲಿ ಇದ್ದು ಮಾರ್ಗದರ್ಶನ ಮಾಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next