Advertisement

ಉಡುಪಿ ಜಿಲ್ಲೆಯಲ್ಲಿ ರಕ್ತ ಕೊರತೆ ಇಲ್ಲ: ಡಿಸಿ

12:07 AM Jun 27, 2020 | Sriram |

ಉಡುಪಿ: ಜಿಲ್ಲೆಯ ರಕ್ತದಾನಿಗಳ ನೆರವಿನಿಂದ ಲಾಕ್‌ಡೌನ್‌ನಂತಹ ತುರ್ತು ಪರಿಸ್ಥಿತಿಯಲ್ಲೂ ನಮ್ಮಲ್ಲಿ ರಕ್ತದ ಕೊರತೆ ಉಂಟಾಗಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

2020ನೇ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಶುಕ್ರವಾರ ಟೌನ್‌ಹಾಲ್‌ನಲ್ಲಿ ಹಮ್ಮಿಕೊಂಡ ಸ್ವಯಂಪ್ರೇರಿತ ರಕ್ತದಾನ ಶಿಬಿರ, ದಾನಿಗಳ ಸಮ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಕರಣ ದಾಖಲು
ಸಾರ್ವಜನಿಕ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಾಗೂ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ ಪ್ರಕರಣ ದಾಖಲಿಸಲಾಗುತ್ತಿದೆ. ಕೋವಿಡ್ 19ದಿಂದ ಗುಣಮುಖರಾದವರೊಂದಿಗೆ ಉತ್ತಮ ರೀತಿಯಾಗಿ ವ್ಯವಹರಿಸಿ. ಕೋವಿಡ್ 19ಕ್ಕೆ ಔಷಧ ಸಿಗುವವರೆಗೂ ನಾವೆಲ್ಲರೂ ಎಚ್ಚರದಿಂದಿರುವುದು ಅಗತ್ಯ ಎಂದರು.

ಸಮ್ಮಾನ
ರಕ್ತದಾನಿಗಳಾದ ರಯಾನ್‌, ನಂದನ್‌ ಶೆಟ್ಟಿ, ಮಣಿಕಂಠ ಖಾರ್ವಿ, ಗಾಯತ್ರಿ, ಸುಧಾಕರ್‌, ಗಿರಿಜಾ ಸುವರ್ಣ ಅವರನ್ನು ಸಮ್ಮಾನಿಸಲಾಯಿತು.

ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಪೊಲೀಸ್‌ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್‌ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ರಾಜ್ಯ ಸರಕಾರಿ ನೌಕರರ ಸಂಘ, ಆರೋಗ್ಯ ಇಲಾಖೆ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಸಂಘ, ಬಡಗಬೆಟ್ಟು ಕೋ -ಆಪ್‌. ಸೊಸೈಟಿ, ಉಡುಪಿ ಹರ್ಷ ಪ್ರೈ.ಲಿ., ಪಿಪಿಸಿ ಕಾಲೇಜು ಎನ್‌ಎಸ್‌ಎಸ್‌ ವಿಭಾಗ, ವೀರಕೇಸರಿ ಸಂಘಟನೆ ಸಾಸ್ತಾನ, ಕೋಡಿತಲೆ, ಕರಾವಳಿ ಸ್ವಯಂಪ್ರೇರಿತ ರಕ್ತದಾನಿಗಳ ಸಂಘ ಗಂಗೊಳ್ಳಿ ಮತ್ತು ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Advertisement

ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಸುಧೀರ್‌ ಚಂದ್ರ ಸೂಡ, ಜಿಲ್ಲಾ ಸರ್ಜನ್‌ ಡಾ| ಮಧುಸೂದನ್‌ ನಾಯಕ್‌, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ, ಬಡಗಬೆಟ್ಟು ಕೋ-ಆಪರೇಟಿವ್‌ ಸೊಸೈಟಿ ಪ್ರ. ವ್ಯವಸ್ಥಾಪಕ ಜಯಕರ್‌ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು.

ಜಿಲ್ಲಾ ಏಡ್ಸ್‌ ನಿಯಂತ್ರಣ ಘಟಕದ ಮೇಲ್ವಿಚಾರಕ ಮಹಾಬಲೇಶ್ವರ್‌ ಸ್ವಾಗತಿಸಿದರು. ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುನಾಥ ಅವರು ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next