Advertisement

ಎರಡನೇ ಡೋಸ್‌ ಪಡೆಯುವವರಿಗೆ ಲಸಿಕೆ ಕೊರತೆ ಉಂಟಾಗುತ್ತಿಲ್ಲ: ಅಶ್ವಥ್ ನಾರಾಯಣ

01:54 PM May 12, 2021 | Team Udayavani |

ಬೆಂಗಳೂರು: ಪ್ರಸ್ತುತ ದಿನಕ್ಕೆ 2.5 ಲಕ್ಷ ಡೋಸ್‌ ಲಸಿಕೆಯನ್ನು ಒದಗಿಸಲಾಗುತ್ತಿದೆ. ಹೀಗಾಗಿ ಎಲ್ಲಿಯೂ ಲಸಿಕೆ ಸಮಸ್ಯೆ ಇಲ್ಲ. ಮೊದಲು ಕೇವಲ 1 ಲಕ್ಷ ಡೋಸ್‌ ಮಾತ್ರ ನೀಡಲಾಗುತ್ತಿತ್ತು. ಸೆಕೆಂಡ್‌ ಡೋಸ್ ಪಡೆಯುತ್ತಿರುವವರಿಗೆ ಕೊರತೆ ಉಂಟಾಗುತ್ತಿಲ್ಲ. ಮೊದಲ ಡೋಸ್‌ ಪಡೆಯುತ್ತಿರುವರಿಗೆ ಮಾತ್ರ ಸಣ್ಣ ಪ್ರಮಾಣದಲ್ಲಿ ಸಮಸ್ಯೆ ಆಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ದಿನ ಏಕಾಎಕಿ ಹೆಚ್ಚು ಜನ ಲಸಿಕೆ ಕೇಂದ್ರಕ್ಕೆ ನುಗ್ಗಬಾರದು. ಈ ಮುನ್ನ ಮೊದಲು ಬಂದರಿಗೆ ಲಸಿಕೆ ಕೊಡಲಾಗುತ್ತಿತ್ತು. ಇನ್ನು ಮುಂದೆ 45 ವರ್ಷ ಮೇಲ್ಪಟ್ಟವರು ಕೂಡ ಆನ್‌ಲೈನ್‌ ಮೂಲಕವೇ ನೋಂದಣಿ ಮಾಡಿಸಿಕೊಳ್ಳಬೇಕು ಎಂದರು.

ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೋವಿಡ್‌ ಸೋಂಕಿತರಿಗೆ ಮನೆ ಬಾಗಿಲಿಗೇ ಓಲಾ ಕ್ಯಾಬ್‌ಗಳ ಮೂಲಕ ಆಮ್ಲಜನಕ ಸಾಂದ್ರಕಗಳನ್ನು (Oxygen Concentrator) ಒದಗಿಸುವ ಕಾರ್ಯಕ್ರಮಕ್ಕೆ ಡಿಸಿಎಂ ಬುಧವಾರ ಚಾಲನೆ ನೀಡಿದರು.

ಮೊದಲು ಬೆಂಗಳೂರಿನಲ್ಲಿ ಈ ವ್ಯವಸ್ಥೆ ಆರಂಭವಾಗುತ್ತಿದ್ದು, ಕ್ರಮೇಣ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ. ಈ ಕೆಲಸದಲ್ಲಿ ಸರಕಾರದ ಜತೆ ಗಿವ್‌ ಇಂಡಿಯಾ ಹಾಗೂ ಓಲಾ ಕ್ಯಾಬ್‌ ಕಂಪನಿಗಳು ಕೈಜೋಡಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next