ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿನ ಕಾರಣ ಹಲವು ತಿಂಗಳುಗಳ ಕಾಲ ಪ್ರವಾಸಿಗರಿಗೆ ನಿಷೇಧ ಹೇರಲಾಗಿದ್ದ ವಿಶ್ವ ವಿಖ್ಯಾತ ನಂದಿ️ ಗಿರಿಧಾಮದಲ್ಲಿ ಈಗ ಪ್ರವಾಸಿಗರಿಗೆ ಪ್ರವೇಶ ನೀಡಲಾಗಿದೆ. ಆದರೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪ್ರಕೃತಿ ಸೌಂದರ್ಯ ಅನುಭವಿಸುವ ಬದಲು ಕೆಲ ಪ್ರವಾಸಿಗರು ಮೋಜು ಮಸ್ತಿ ಮಾಡಿ ಇನ್ನಿತರೆ ಪ್ರವಾಸಿಗರಿಗೆ ಕಿರಿಕಿರಿ ಉಂಟು ಮಾಡಿದ ಘಟನೆ ರವಿವಾರ ನಡೆದಿದೆ.
ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ನಂದಿ️ ಗಿರಿಧಾಮಕ್ಕೆ ಬರುವ ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದೆಕೊಳ್ಳಬೇಕು ಜೊತೆಗೆ ಸ್ಯಾನಿಟೈಸರ್ ಬಳಸಬೇಕೆಂದು ಷರತ್ತುಗಳನ್ನು ವಿಧಿಸಿ ಜಿಲ್ಲಾಡಳಿತ ಪ್ರವಾಸಿಗರಿಗೆ ಪ್ರವೇಶ ಕಲ್ಪಿಸಿತ್ತು ಆದರೇ ಕೆಲ ಪ್ರವಾಸಿಗರು ಜಿಲ್ಲಾಡಳಿತ ನೀಡಿರುವ ಅವಕಾಶವನ್ನು ದುರುಪಯೋಗ ಮಾಡಿಕೊಂಡು ನಂದಿ️ ಗಿರಿಧಾಮವನ್ನು ಬಾರ್ ಮಾಡಿಕೊಂಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ:ನನಗೆ ಆಸ್ತಿಯ ಆಸೆಯಿಲ್ಲ, ಪತ್ನಿಯ ಅರೋಪಗಳಲ್ಲಿ ಹುರುಳಿಲ್ಲ: ಚಿತ್ರ ಸಾಹಿತಿ ಕೆ.ಕಲ್ಯಾಣ್
ಭಾನುವಾರದಂದು ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿ️ದ್ದಾರೆ. ಆದರೇ ಕೋವಿಡ್ ಸೋಂಕು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳನ್ನು ಪಾಲಿಸಿಲ್ಲ. ಬಹುತೇಕ ಪ್ರವಾಸಿಗರು ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರ ಅಂತು ಇಲ್ಲವೇ ಇಲ್ಲ. ಇದರ ಮಧ್ಯೆ ಕೆಲವರು ರಸ್ತೆಯ ಮಧ್ಯೆ ಕಾರು ನಿಲ್ಲಿಸಿ ಬಾನೆಟ್ ಮೇಲೆ ಕುಳಿತು ಮದ್ಯಪಾನ ಮಾಡಿ ಟ್ರಾಫಿಕ್ ಜಾಮ್ ಮಾಡಿ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದಾರೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ನಿಯಮಗಳನ್ನು ಉಲಂಘಿಸಿ ಸಾರ್ವಜನಿಕವಾಗಿ ಮದ್ಯಪಾನ ಮಾಡಿ ಮೋಜು ಮಸ್ತಿ ಮಾಡಿರುವ ಪ್ರವಾಸಿಗರ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.
ರಜಾ ದಿನವಾದ ಇಂದು ನಂದಿ️ಗಿರಿಧಾಮದಲ್ಲಿ ಪ್ರಕೃತಿಯ ಸೊಬಗು ಸೇವಿಸಲು ಸಹಸ್ರಾರು ಮಂದಿ️ ಪ್ರವಾಸಿಗರು ಬೆಳಿಗ್ಗೆಯಿಂದ ಆಗಮಿಸಿದ್ದಾರೆ. ಆದರೆ ಮುನ್ನೆಚ್ಚರಿಕೆ ಕ್ರಮಗಳಿಗೆ ತಿಲಾಂಜಲಿ ಇಟ್ಟಿದ್ದಾರೆ. ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿ️ದ್ದರಿಂದ ಟ್ರಾಫಿಕ್ ಜಾಮ್ ಆಗಿ ಎಲ್ಲರೂ ಕಿರಿಕಿರಿ ಅನುಭವಿಸುಂತಾಯಿತು. ಪ್ರವಾಸಿಗರ ಸಂಖ್ಯೆಗೆ ಅನುಗುಣವಾಗಿ ಇಲ್ಲಿ ಭದ್ರತೆ ವ್ಯವಸ್ಥೆ ಇಲ್ಲದೇ ಪ್ರವಾಸಿಗರು ಪರದಾಡುವಂತಾಯಿತು.
ಈ ಕುರಿತು ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಅವರನ್ನು ಉದಯವಾಣಿ ಸಂಪರ್ಕಿಸಿದಾಗ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ನಂದಿ️ಗಿರಿಧಾಮದಲ್ಲಿ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗಿದೆ. ಮಾಸ್ಕ್ ಧರಿಸದೆ ನಿರ್ಲಕ್ಷ್ಯ ಮಾಡುತ್ತಿರುವ ನಾಗರಿಕರಿಗೆ ನಗರಸಭೆ-ಪುರಸಭೆಯ ಅಧಿಕಾರಿಗಳು ದಂಡ ವಿಧಿಸುತ್ತಿದ್ದಾರೆ. ಪ್ರವಾಸಿಗರು ಸಹ ತಮ್ಮ ಆರೋಗ್ಯದ ಕುರಿತು ಚಿಂತನೆ ಮಾಡಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಜೊತೆಗೆ ರಸ್ತೆಯಲ್ಲಿ ಕುಳಿತು ಮದ್ಯಪಾನ ಮಾಡಿ ನಿಯಮವನ್ನು ಉಲಂಘಿಸಿರುವ ವ್ಯಕ್ತಿಗಳ ಮೇಲೆ ಕ್ರಮ ಜರುಗಿಸುತ್ತೇವೆ ಎಂದಿ️ದ್ದಾರೆ.