Advertisement

45 ಎಚ್‌ಪಿ ಮೇಲ್ಪಟ್ಟ ಟ್ರ್ಯಾಕ್ಟರ್ ಗಳಿಗೆ ಸಹಾಯಧನ ಇಲ್ಲ: ಸಚಿವ ಬಿ.ಸಿ.ಪಾಟೀಲ್‌

08:39 PM Dec 28, 2022 | Team Udayavani |

ಸುವರ್ಣ ವಿಧಾನಸೌಧ: ಕೃಷಿ ಕ್ಷೇತ್ರಕ್ಕೆ ಯಂತ್ರೋಪಕರಣ ಯೋಜನೆಯಡಿ ರೈತರಿಗೆ 45 ಎಚ್‌ಪಿಗಿಂತ ಹೆಚ್ಚಿನ ಸಾಮರ್ಥ್ಯ ಹೊಂದಿರುವ ಟ್ರ್ಯಾಕ್ಟರ್ ಗಳಿಗೆ ಸಹಾಯಧನ ನೀಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದ್ದಾರೆ.

Advertisement

ವಿಧಾನಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಶೃಂಗೇರಿ ಶಾಸಕ ರಾಜೇಗೌಡ ಪ್ರಶ್ನೆಗೆ ಉತ್ತರಿಸಿ, ಕೃಷಿಗೆ 45 ಎಚ್‌ಪಿ ಒಳಗಿನ ಸಾಮರ್ಥ್ಯದ ಟ್ರ್ಯಾಕ್ಟರ್ ಗಳು ಸಾಕಾಗುತ್ತವೆ. ಹಾಗಾಗಿ ಹೆಚ್ಚಿನ ಬೇಡಿಕೆಯೇನೂ ಇರುವುದಿಲ್ಲ, ಅಂತಹ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದರು.

ಮಲೆನಾಡು ಬೆಟ್ಟ ಗುಡ್ಡಗಳಿಂದ ಕೂಡಿದ್ದು, ಬಯಲುಸೀಮೆಯ ಹಾಗಿರುವುದಿಲ್ಲ, ಇಲ್ಲಿ ಸಣ್ಣ ಸಾಮರ್ಥ್ಯದ ಟ್ರ್ಯಾಕ್ಟರ್ ಗಳು ಕೆಸರಲ್ಲಿ ಹೂತುಬಿಡುತ್ತವೆ, ಹಾಗಾಗಿ 45 ಎಚ್‌ಪಿಗಿಂತ ಹೆಚ್ಚು ಸಾಮರ್ಥ್ಯದ ಟ್ರ್ಯಾಕ್ಟರ್‌ಗಳಿಗೆ ಸಹಾಯಧನ ನೀಡಬೇಕೆಂದು ರಾಜೇಗೌಡ ಈ ವೇಳೆ ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next