Advertisement

APL-BPL ಅಂತೇನಿಲ್ಲ, ರಾಜ್ಯಾದ್ಯಂತ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಘೋಷಣೆ

01:49 PM May 30, 2023 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಇದಕ್ಕೆ ಎಪಿಎಲ್ – ಬಿಪಿಎಲ್ ಎಂಬ ಯಾವುದೇ ನಿಬಂಧನೆಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

Advertisement

ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು ಎಂದರು.

ಸಭೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸುತ್ತೇವೆ. ಅವರು ಅಂತಿಮ ಕ್ರಮ ಕೈಗೊಳ್ಳುತ್ತಾರೆ ಎಂದರು.

ಇದನ್ನೂ ಓದಿ:ಪೊಲೀಸ್ ಇಲಾಖೆಗೆ ಸರ್ಜರಿ: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ ನೇಮಕ

ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಸಭೆ ನಡೆದಿದೆ. ಪ್ರತಿ ವರ್ಷ ಅಂದಾಜು 3,200 ಕೋಟಿ ಹಣ ಬೇಕಾಗುತ್ತದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ನಷ್ಟದಲ್ಲಿರುವ ಹಿನ್ನೆಲೆ ಸರ್ಕಾರ ಸಹಾಯಧನ ನೀಡಿದರೇ ಯೋಜನೆ ಜಾರಿಗೆ ಮಾಡಲು ಅನುಕೂಲವಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next