Advertisement

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

12:27 AM Oct 06, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆಯೇ ಆಗಿಲ್ಲ. ನಾನು ದಿಲ್ಲಿಗೆ ಭೇಟಿ ನೀಡುವಂತಹ ಯಾವ ಪ್ರಸಂಗವೂ ಉದ್ಭವಿಸಿಲ್ಲ. ವೇಣುಗೋಪಾಲ್‌ ಅವರು ರಾಜ್ಯಕ್ಕೆ ಆಗಮಿಸುವ ಬಗ್ಗೆ ನನಗೆ ಮಾಹಿತಿ ಇಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಮ್ಮ ಪಕ್ಷದ ನಾಯಕರು ಭೇಟಿ ಮಾಡುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Advertisement

ಶನಿವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ನಾಯಕರು ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡದೆ ಯಾರನ್ನು ಭೇಟಿ ಮಾಡಬೇಕು? ನಾನು ದಿಲ್ಲಿಗೆ ಭೇಟಿ ಕೊಟ್ಟಾಗಲೆಲ್ಲ ನಮ್ಮ ಅಧ್ಯಕ್ಷರನ್ನು ಭೇಟಿ ಮಾಡಿ ಬರುತ್ತೇನೆ. ಕೆಪಿಸಿಸಿ ಅಧ್ಯಕ್ಷರಾಗಿ ನಿತ್ಯವೂ ಅವರ ಸಂಪರ್ಕದಲ್ಲಿ ಇರುತ್ತೇನೆ. ಪಕ್ಷದ ಬೆಳವಣಿಗೆಗಳ ಬಗ್ಗೆ ವರದಿ ನೀಡುತ್ತಿರುತ್ತೇನೆ. ಅದಕ್ಕೆಂದೇ ನಮ್ಮಲ್ಲಿ ಒಂದು ಪ್ರತ್ಯೇಕ ತಂಡವೂ ಇದೆ ಎಂದರು.

ಸಚಿವರು, ಶಾಸಕರು, ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡುವುದು ಸ್ವಾಭಾವಿಕ. ಇದನ್ನು ತಪ್ಪಾಗಿ ಅರ್ಥೈಸುವ ಅಗತ್ಯವಿಲ್ಲ. ನನ್ನನ್ನೂ ನೂರಾರು ಮಂದಿ ಬಂದು ಭೇಟಿ ಮಾಡುತ್ತಾರೆ. ಮಾಧ್ಯಮದವರೂ ರಾಜಕಾರಣಿಗಳನ್ನು ಭೇಟಿ ಮಾಡುತ್ತಾರೆ, ರಾಜಕಾರಣಿಗಳೂ ಮಾಧ್ಯಮದವರನ್ನು ಭೇಟಿ ಆಗುವುದಿಲ್ಲವೇ? ಅದೆಲ್ಲದಕ್ಕೂ ವಿಶೇಷ ಅರ್ಥ ಕಲ್ಪಿಸಲು ಸಾಧ್ಯವೇ? ರಾಜಕೀಯ, ಆಡಳಿತ ಹಾಗೂ ಕೆಲವು ಸನ್ನಿವೇಶಗಳ ಸಮಸ್ಯೆ ಬಗ್ಗೆ ಚರ್ಚೆ ಮಾಡುವುದು ಸಹಜ ಎಂದರು.

ನಿಗಮ ಮಂಡಳಿ ನೇಮಕ ವಿಳಂಬದ ಬಗ್ಗೆ ಬೇಸರ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ, ನಾವು ಸಮಿತಿ ರಚಿಸಿದ್ದು, ಶಾಸಕರು ಸೇರಿದಂತೆ ಮುಖಂಡರ ಜತೆ ಚರ್ಚೆ ಮಾಡಲಾಗುವುದು. ಮುಂದಿನ ವಾರ ಇದು ಅಂತಿಮವಾಗಲಿದೆ ಎಂದು ತಿಳಿಸಿದರು.

ಜಾತಿ ಗಣತಿ: ಪಕ್ಷದ ನೀತಿಯಂತೆ ನಡೆ
ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಈ ವಿಚಾರದಲ್ಲಿ ವೈಯಕ್ತಿಕ ಅಭಿಪ್ರಾಯವೇ ಬೇರೆ, ಪಕ್ಷದ ಅಧ್ಯಕ್ಷರಾಗಿ ಅಭಿಪ್ರಾಯ ಬೇರೆ. ಪಕ್ಷದ ನೀತಿಯಂತೆ ನಾವು ನಡೆಯಬೇಕು. ಪಕ್ಷದ ನೀತಿಯನ್ನು ನಾನೊಬ್ಬನೇ ತೀರ್ಮಾನಿಸಲು ಆಗುವುದಿಲ್ಲ. ಇಡೀ ಪಕ್ಷ ಹಾಗೂ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ರಾಹುಲ್‌ ಗಾಂಧಿ ನಮಗೆ ನಿರ್ದಿಷ್ಟ ನಿರ್ದೇಶನ ನೀಡಿದ್ದು, ಪಕ್ಷದ ಪ್ರಣಾಳಿಕೆಯಲ್ಲಿ ಕೆಲವು ವಿಚಾರ ಪ್ರಸ್ತಾವವಾಗಿವೆ. ಎಲ್ಲವನ್ನು ಗಮನದಲ್ಲಿ ಇಟ್ಟುಕೊಂಡು ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

Advertisement

ಕೇಂದ್ರ ಸಚಿವ ಕುಮಾರಸ್ವಾಮಿ ಅವರ ವೈಯಕ್ತಿಕ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ನಾನು ಗೃಹ ಸಚಿವನಲ್ಲ. ಅವರ ವಿರುದ್ಧ ಪ್ರಕರಣ ದಾಖಲಾಗಿರುವ ಬಗ್ಗೆ ನನಗೆ ಗೊತ್ತೂ ಇಲ್ಲ. ನಾನು ದಸರಾ ಕಾರ್ಯಕ್ರಮ ಉದ್ಘಾಟನೆ ಹಾಗೂ ಚನ್ನಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆಯಲ್ಲಿ ನಿರತನಾಗಿ¨ªೆ.
-ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next