Advertisement

ಪಾಕ್‌ ಜೊತೆ ಮಾತುಕತೆ ಇಲ್ಲ: ರಾಯಭಾರಿ

12:33 AM May 25, 2019 | Team Udayavani |
ವಾಷಿಂಗ್ಟನ್‌: ಪಾಕಿಸ್ತಾನವು ಉಗ್ರ ಸಂಘಟನೆಗಳನ್ನು ಬೆಂಬಲಿಸುತ್ತಿರುವವರೆಗೂ ಭಾರತ ಮಾತುಕತೆ ನಡೆಸುವುದಿಲ್ಲ ಎಂದು ಅಮೆರಿಕಕ್ಕೆ ಭಾರತದ ರಾಯಭಾರಿ ಹರ್ಷವರ್ಧನ್‌ ಶ್ರಿಂಗ್ಲಾ ಪುನರುಚ್ಛರಿಸಿದ್ದಾರೆ. ಭಾರತದಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತಿದ್ದಂತೆಯೇ ಅವರು ಈ ಹೇಳಿಕೆ ನೀಡಿದ್ದು ಮಹತ್ವ ಪಡೆದಿದೆ. ಪುಲ್ವಾಮಾ ದಾಳಿ ನಂತರದಲ್ಲಿ ಉಭಯ ದೇಶಗಳ ಸಂಬಂಧ ಇನ್ನಷ್ಟು ಕುಸಿದಿತ್ತು. ಅಷ್ಟೇ ಅಲ್ಲ, ಬಾಲಕೋಟ್‌ನಲ್ಲಿ ಭಾರತ ಪ್ರತಿದಾಳಿ ನಡೆಸಿ ಉಗ್ರರನ್ನು ಮಟ್ಟಹಾಕಿದ ಮೇಲಂತೂ ಇನ್ನಷ್ಟು ಬಿಗಡಾಯಿಸಿತ್ತು. ಭಾರತದ ಪ್ರತಿಯೊಬ್ಬ ಭಾರತೀಯನೂ ಪಾಕಿಸ್ತಾನದೊಂದಿಗೆ ಉತ್ತಮ ಸಂಬಂಧ ಸಾಧಿಸಬೇಕು ಎಂದೇ ಬಯಸುತ್ತಾನೆ. ಬಾಂಗ್ಲಾದೇಶ, ನೇಪಾಳ, ಭೂತಾನ್‌, ಶ್ರೀಲಂಕಾ, ಮಾಲ್ಡೀವ್ಸ್‌, ಅಫ್ಘಾನಿಸ್ತಾನದ ಜೊತೆಗೆ ನಮ್ಮ ಸಂಬಂಧ ಉತ್ತಮವಾಗಿದೆ. ಆದರೆ ಪಾಕಿಸ್ತಾನವು ನಮ್ಮ ವಿರುದ್ಧವೇ ಕೆಲಸ ಮಾಡುವ ಉಗ್ರರನ್ನು ಬೆಂಬಲಿಸುತ್ತಿರುವಾಗ ಮಾತುಕತೆ ಸಾಧ್ಯವಿಲ್ಲ ಎಂದು ಹರ್ಷವರ್ಧನ್‌ ಹೇಳಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next