Advertisement
ಘಟಕದ ದ.ಕ. ಜಿಲ್ಲಾ ಕಾರ್ಯಾಧ್ಯಕ್ಷ ಗುರುಚಂದ್ರ ಹೆಗ್ಡೆ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರು ಉತ್ತರ ವಲಯದಲ್ಲಿ 6, ದಕ್ಷಿಣದಲ್ಲಿ 3, ಮೂಡುಬಿದಿರೆ 5, ಬೆಳ್ತಂಗಡಿ 3, ಪುತ್ತೂರು 1, ಬಂಟ್ವಾಳ 4, ಸುಳ್ಯದ 1 ಶಾಲೆಯಲ್ಲಿ ಸರಕಾರಿ ಶಿಕ್ಷಕರೇ ಇಲ್ಲ. ಹೀಗಾಗಿ ಈ ಎಲ್ಲ ಶಾಲೆಗಳು ಯಾವುದೇ ಸಂದರ್ಭದಲ್ಲಿ ಮುಚ್ಚುವ ಪರಿಸ್ಥಿತಿಯಿದೆ. ಮಂಗಳೂರಿನ ದೇರೆಬೈಲ್ ಹೋಲಿ ಫ್ಯಾಮಿಲಿ ಹಿರಿಯ ಪ್ರಾಥಮಿಕ ಶಾಲೆ ಈಗಾಗಲೇ ಮುಚ್ಚಿದೆ ಎಂದರು.
ಕನ್ನಡ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ಮಾಡದಿರುವುದು ಹಾಗೂ ಶಾಲೆಗಳನ್ನು ಮುಚ್ಚುತ್ತಿರುವ ಬಗ್ಗೆ ನ. 19ರಂದು ಮಂಗಳೂರಿಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದರು.
Related Articles
Advertisement