Advertisement
ಸದ್ಯ ವಿಧಾನಸಭೆಯಲ್ಲಿ 312 ಬಿಜೆಪಿ ಶಾಸಕರಿದ್ದಾರೆ. ಇವರಲ್ಲಿ ಬಹುತೇಕರು 2017ರ ಚುನಾವಣೆಗೂ ಮುನ್ನ ಬೇರೆ ಪಕ್ಷಗಳಿಂದ ವಲಸೆ ಬಂದವರು. ಈ ಎಲ್ಲಾ ಶಾಸಕರ ಸಾಧನೆಗಳ ಅವಲೋಕನವನ್ನು ಗೃಹ ಸಚಿವ ಅಮಿತ್ ಶಾ ನಡೆಸಲಿದ್ದಾರೆ. ಹಲವು ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಮತದಾರರ ವಿಶ್ವಾಸ ಕಳೆದುಕೊಂಡಿರುವ ಬಗ್ಗೆ ಮಾಹಿತಿ ಇದೆ. ಮೂಲಗಳ ಪ್ರಕಾರ ಸರಿ ಸುಮಾರು 100 ಶಾಸಕರಿಗೆ 2022ರ ಚುನಾವಣೆಯಲ್ಲಿ ಟಿಕೆಟ್ ನೀಡದೆ ಇರುವ ಸಾಧ್ಯತೆ ಅಧಿಕವಾಗಿದೆ. ಅವರೆಲ್ಲರನ್ನೂ ಕೈಬಿಟ್ಟು ಹೊಸ ಮುಖಗಳಿಗೆ ಅವಕಾಶ ಕೊಡುವ ಚಿಂತನೆಯನ್ನು ಅವರು ಹೊಂದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ “ದ ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.
ಉತ್ತರ ಪ್ರದೇಶ ಬಿಜೆಪಿ ಘಟಕ ಶುಕ್ರವಾರ (ಅ.29) ಸದಸ್ಯತ್ವ ಅಭಿಯಾನ ಶುರು ಮಾಡಲಿದೆ. ಲಕ್ನೋಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅದಕ್ಕೆ ಚಾಲನೆ ನೀಡಲಿದ್ದಾರೆ. ಆ ದಿನ ರಾತ್ರಿ ಲಕ್ನೋದಲ್ಲಿ ವಾಸ್ತವ್ಯ ಹೂಡಲಿರುವ ಅಮಿತ್ ಶಾಸಕರ ಸಾಧನೆಗಳನ್ನು ಪರಿಶೀಲಿಸಲಿದ್ದಾರೆ. ಈ ಮೂಲಕ ಆಡಳಿತಾರೂಢ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗುವ ಸಾಧ್ಯತೆಗಳು ದಟ್ಟವಾಗಿವೆ. ಸದ್ಯ ಉತ್ತರ ಪ್ರದೇಶದಲ್ಲಿ 2.3 ಕೋಟಿ ಸದಸ್ಯರಿದ್ದಾರೆ. ಹೊಸತಾಗಿ 1.5 ಕೋಟಿ ಸದಸ್ಯರನ್ನು ಸೇರ್ಪಡೆಗೊಳಿಸುವ ಇರಾದೆಯಲ್ಲಿದೆ ಬಿಜೆಪಿ.
Related Articles
Advertisement