Advertisement
ಭದ್ರತಾ ಬೆದರಿಕೆಯನ್ನು ಉಲ್ಲೇಖಿಸಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಡೆಪ್ಯುಟಿ ಸ್ಪೀಕರ್ ವಜಾಗೊಳಿಸಿದ್ದಾರೆ. ಇಂದು ಸಂಸತ್ ಕಲಾಪ ಆರಂಭಗೊಂಡ ಕೆಲವೇ ನಿಮಿಷಗಳಲ್ಲಿ, ಡೆಪ್ಯುಟಿ ಸ್ಪೀಕರ್ ಕಲಾಪವನ್ನು ಏಪ್ರಿಲ್ 25ರವರೆಗೆ ಮುಂದೂಡಿದ್ದಾರೆ.
Related Articles
Advertisement
ಮಾರ್ಚ್ 8ರಂದು ರಾಷ್ಟ್ರದ ಆರ್ಥಿಕ ಬಿಕ್ಕಟ್ಟು ಮತ್ತು ಹಣದುಬ್ಬರ ಹೆಚ್ಚಳಕ್ಕೆ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷವೇ ಕಾರಣ ಎಂದು ಆರೋಪಿಸಿ, ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿಯ ಸೆಕ್ರೆಟರಿಯೇಟ್ ಗೆ ಮಾರ್ಚ್ 8ರಂದು ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿದ್ದವು.
ಮಾರ್ಚ್ 25ರಂದು ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯದ ಕುರಿತು ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿಯ ನಿರ್ಣಾಯಕ ಅಧಿವೇಶನವು ಪ್ರತಿಪಕ್ಷದ ಶಾಸಕರ ಗದ್ದಲದ ಪ್ರತಿಭಟನೆಯ ನಡುವೆ ನಿರ್ಣಯವನ್ನು ಮಂಡಿಸದೆ ಮುಂದೂಡಲ್ಪಟ್ಟಿತು.