Advertisement

ರಾಷ್ಟ್ರೀಯ ಲಾಂಛನ: ಸುಪ್ರೀಂ ಕೋರ್ಟ್‌ನಿಂದ ಪಿಐಎಲ್‌ ವಜಾ

08:04 AM Oct 01, 2022 | Team Udayavani |

ನವದೆಹಲಿ: ರಾಷ್ಟ್ರ ರಾಜಧಾನಿಯ ಸೆಂಟ್ರಲ್‌ ವಿಸ್ತಾದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್‌ ಭವನಕ್ಕಾಗಿ ಸಿದ್ಧಗೊಂಡಿರುವ ರಾಷ್ಟ್ರೀಯ ಲಾಂಛನವು 2005ರ ಭಾರತದ ಲಾಂಛನ(ಅಸಮರ್ಪಕ ಬಳಕೆ ನಿಷೇಧ) ಕಾಯ್ದೆಯನ್ನು ಉಲ್ಲಂಘಿ ಸಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿತು.

Advertisement

ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ಆರ್‌.ಶಾ ಮತ್ತು ನ್ಯಾ. ಕೃಷ್ಣ ಮುರಾರಿ ಅವರನ್ನು ಒಳಗೊಂಡ ನ್ಯಾಯಪೀಠ, “ಅನಿಸಿಕೆಯು ವ್ಯಕ್ತಿಯ ಮನಸ್ಸಿನ ಮೇಲೆ ಅವಲಂಬಿತವಾಗಿರುತ್ತದೆ. ಇಲ್ಲಿ ಕಾಯ್ದೆಯ ಉಲ್ಲಂಘನೆ ಆಗಿಲ್ಲ,’ ಎಂದು ಸ್ಪಷ್ಟಪಡಿಸಿತು.

ನೂತನವಾಗಿ ಸಿದ್ಧಗೊಂಡಿರುವ ರಾಷ್ಟ್ರೀಯ ಲಾಂಛನದಲ್ಲಿ ಸಿಂಹಗಳು ಉಗ್ರ ಮತ್ತು ಆಕ್ರಮಣಕಾರಿಯಾಗಿ ಕಾಣುತ್ತಿದೆ.

ಸಾರನಾಥದಲ್ಲಿ ಇರುವ ಸಾಮ್ರಾಟ್‌ ಅಶೋಕನ ಲಾಂಛನದಲ್ಲಿ ಇದ್ದಂತೆ ಸಿಂಹಗಳು ಸೌಮ್ಯವಾಗಿಲ್ಲ ಎಂದು ಆರೋಪಿಸಿ ಇಬ್ಬರು ವಕೀಲರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next