ಹೊಸಪೇಟೆ: ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಎಲ್ಲ ವಿಚಾರ ಹೇಳಿದ್ದೇನೆ. ಅವರು ಹೇಗೆ ಸಮಸ್ಯೆ ಬಗೆಹರಿಸುತ್ತಾರೆ ಕಾದು ನೋಡೋಣ ಎಂದು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದರು.
ನಗರದ ಪಟೇಲ್‌ನಗರದ ಶ್ರೀ ವೇಣುಗೋಪಾಲಕೃಷ್ಣ ದೇಗುಲದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಮನವಿ ಏನಿದೆಯೋ ಅದನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೇರವಾಗಿಯೇ ಹೇಳಿದ್ದೇನೆ. ಅವರು ಹೇಗೆ ಸಮಸ್ಯೆ ಬಗೆಹರಿಸುತ್ತಾರೆ ಕಾದು ನೋಡೋಣ. ನಾನು ದಿಲ್ಲಿಗೆ ಹೋಗುತ್ತೇನೆ. ವರಿಷ್ಠರನ್ನು ಭೇಟಿಯಾಗುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಆ.15ರಂದು ಹೊಸಪೇಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಬೆಂಗಳೂರಿಗೆ ತೆರಳುತ್ತೇನೆ ಎಂದರು.
ಮಾಜಿ ಸಿಎಂ ಯಡಿಯೂರಪ್ಪ ನಮ್ಮ ಹಿರಿಯ ನಾಯಕರು. ಅವರ ಆಶೀರ್ವಾದ ಪಡೆಯಲು ಭೇಟಿಯಾಗಿದ್ದೆ. ಬಿಎಸ್‌ವೈ ಬಳಿ ಏನೂ ಮಾತನಾಡಿಲ್ಲ. ಸಿಎಂ ಬಳಿಯೇ ಮಾತನಾಡಿದ್ದೇನೆ. ಯಡಿಯೂರಪ್ಪನವರು ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡ ಎಂದು ತಮ್ಮ ಹಿರಿತನದಿಂದ ಅನುಭವದ ಮಾತುಗಳನ್ನು ಹೇಳಿದ್ದಾರೆ.
ಇದನ್ನೂ ಓದಿ:ಭಾರತೀಯ ಕ್ರಿಕೆಟಿಗೆ ವಿದಾಯ ಹೇಳಿದ ಉನ್ಮುಕ್ತ್ ಚಂದ್
ನಾವು ಕೆಲವೊಮ್ಮೆ ಭಾವನಾತ್ಮಕವಾಗಿ ನಿರ್ಧಾರ ತೆಗೆದುಕೊಂಡು ಬೀಡುತ್ತೇನೆ. ಹೀಗಾಗಿ ಅವರು ಸಲಹೆ ನೀಡಿದ್ದಾರೆ. ನಾನು ಬೇಡಿಕೆ ಇಟ್ಟಿರುವ ಖಾತೆ ಕೊಡಿಸುವಂತೆ ಯಡಿಯೂರಪ್ಪ ಅವರಿಂದ ಬಸವರಾಜ ಬೊಮ್ಮಾಯಿ ಅವರಿಗೆ ಶಿಫಾರಸು ಮಾಡಿಸಿಲ್ಲ. ಯಡಿಯೂರಪ್ಪ ಅವರ ಋಣ ತೀರಿಸಲು ಸಾಧ್ಯವಿಲ್ಲ. ನೂತನ ವಿಜಯನಗರ ಜಿಲ್ಲೆಯನ್ನು ಘೋಷಿಸುವ ಮೂಲಕ ದೊಡ್ಡ ಕೊಡುಗೆಯನ್ನೇ ನೀಡಿದ್ದಾರೆ. ನಾನು ಕೇಳಿದ್ದಕ್ಕಿಂತ ಹೆಚ್ಚಿನ ಮಟ್ಟದಲ್ಲೇ ನೀಡಿದ್ದಾರೆ ಎಂದರು.