Advertisement

Bangalore: ಜುಲೈವರೆಗೆ ನೀರಿನ ಸಮಸ್ಯೆ ಇಲ್ಲ; ಜಲಮಂಡಳಿ

11:21 AM Feb 25, 2024 | Team Udayavani |

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರು ವ್ಯಾಪ್ತಿಯಲ್ಲಿ ವಾರ್ಷಿಕವಾಗಿ 19 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗುತ್ತಿದ್ದು, ಪ್ರತಿ ನಿತ್ಯ 1472 ಎಂ.ಎಲ್‌.ಡಿ ನೀರು ಪೂರೈಸಲಾಗುತ್ತಿದೆ. ಫೆಬ್ರವರಿಯಿಂದ ಜುಲೈವರೆಗೆ ಅಂದಾಜು 9.48 ಟಿಎಂಸಿ ನೀರಿನ ಅವಶ್ಯಕತೆ ಇದ್ದು, ಅಷ್ಟು ನೀರು ಲಭ್ಯವಿದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದರು.

Advertisement

ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಕುರಿತು ಶನಿವಾರ ಪಾಲಿಕೆ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆದ ಸಮನ್ವಯ ಸಭೆಯಲ್ಲಿ ಅವರು ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಳಕೆ ಮತ್ತು ಅವಶ್ಯವಿರುವ ನೀರಿನ ಕುರಿತಂತೆ ಮಾಹಿತಿ ನೀಡಿದರು.

ನಗರದಲ್ಲಿ ಜಲಮಂಡಳಿಯಿಂದ 10.84 ಲಕ್ಷ ನೀರಿನ ಸಂಪರ್ಕ ಕಲ್ಪಿಸಲಾಗಿದೆ. 10955 ಕೊಳವೆ ಬಾವಿಗಳಲ್ಲಿ 1214 ಕೊಳವೆ ಬಾವಿಗಳು ಬತ್ತಿದ್ದು, 3700 ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಈ ಸಂಬಂಧ ಸರಿಪಡಿಸಬಹುದಾದ ಕೊಳವೆ ಬಾವಿಗಳನ್ನು ಗುರುತಿಸಿ ಅಂತಹವುಗಳನ್ನು ಫಷಿಂಗ್‌ ಹಾಗೂ ರೀಡ್ರಿಲ್‌ ಮಾಡಲು ಕ್ರಮವಹಿಸಲಾಗುತ್ತಿದೆ ಎಂದರು.

257 ಸ್ಥಳಗಳಲ್ಲಿ ನೀರಿನ ಸಮಸ್ಯೆ: ರಾಜಧಾನಿಯ ನೀರಿನ ಸಮಸ್ಯೆ ಹೆಚ್ಚಿರುವ 257 ಸ್ಥಳಗಳನ್ನು ಗುರುತಿಸಿದ್ದು, ಆ ಪ್ರದೇಶಗಳಿಗೆ ಪೂರೈಸಲು 68 ಟ್ಯಾಂಕರ್‌ಗಳ ಜೊತೆಗೆ 18 ಹೊಸದಾಗಿ ಖರೀದಿಸಲಾಗುತ್ತದೆ. 200 ಬಾಡಿಗೆಗೆ ಪಡೆಯಲು ಕ್ರಮವಹಿಸಲಾಗಿದೆ. ಜೊತೆಗೆ ಕಾವೇರಿ 5ನೇ ಹಂತ ಏಪ್ರಿಲ್‌ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ರಾಜರಾಜೇಶ್ವರಿ ವಲಯ ವ್ಯಾಪ್ತಿಯಲ್ಲಿ ಪ್ರಮುಖ ಸ್ಥಳಗಳಲ್ಲಿ ಈಗಾಗಲೇ ಸಿಂಟೆಕ್ಸ್‌ ಟ್ಯಾಂಕ್‌ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಎಲ್ಲಾ ವಲಯಗಳಲ್ಲಿಯೂ ಪ್ರಮುಖ ಸ್ಥಳ, ಕೊಳಗೇರಿ ಪ್ರದೇಶ, ಇನ್ನಿತರೆ ಸ್ಥಳಗಳಲ್ಲಿ ಟ್ಯಾಂಕ್‌ ಅಳವಡಿಸಿ ಜಲಮಂಡಳಿಯಿಂದ ನೀರಿನ ವ್ಯವಸ್ಥೆ ಮಾಡಲಾಗುವುದು ಹೇಳಿದರು.

Advertisement

ಸಭೆಯಲ್ಲಿ ಪಾಲಿಕೆ ಆಡಳಿತಾಧಿಕಾರಿ ರಾಕೇಶ್‌ಸಿಂಗ್‌, ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ.ಕೆ.ಹರೀಶ್‌ಕುಮಾರ್‌, ಪಾಲಿಕೆ ಮತ್ತು ಜಲಮಂಡಳಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬೋರ್‌ವೆಲ್‌ ಕೊರೆಯಲು 131 ಕೋಟಿ ರೂ.: ಗಿರಿನಾಥ್‌

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಮುಂಜಾಗ್ರತೆ ಯಾಗಿ ಪಾಲಿಕೆ ಸಿದ್ಧತೆ ಮಾಡಿ ಕೊಂ ಡಿದೆ. ಮಹದೇವ ಪುರ, ಆರ್‌.ಆರ್‌. ನಗರ, ಬೊಮ್ಮನ ಹಳ್ಳಿ, ದಾಸರ ಹಳ್ಳಿ ಹಾಗೂ ಯಲಹಂಕ ವಲಯ ವ್ಯಾಪ್ತಿಯ 110 ಬಡಾವಣೆಗಳಿಗೆ ಕುಡಿ ಯುವ ನೀರಿನ ಕೊಳವೆ ಬಾವಿ ಕೊರೆ ಯಲು 131 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ಗಿರಿನಾಥ್‌ ಹೇಳಿದರು.  ಸಮನ್ವಯ ಸಭೆಯಲ್ಲಿ ಮಾತ ನಾಡಿ, ರಾಜಧಾನಿಯ 58 ಕಡೆ ನೀರಿನ ಸಮಸ್ಯೆ ಯಿದ್ದು, ಮಹದೇವ ಪುರ 16, ಆರ್‌.ಆರ್‌. ನಗರ 25, ಬೊಮ್ಮನಹಳ್ಳಿ 5 ಕಡೆ, ಯಲಹಂಕ ಹಾಗೂ ದಾಸರಹಳ್ಳಿ ತಲಾ 3 ಕಡೆ ನೀರಿನ ಅಭಾವ  ಗಮನಕ್ಕೆ ಬಂದಿದೆ ಎಂದರು.

ತುರ್ತು ಇರುವ ಕಡೆ ಬೋರ್ ವೆಲ್:

ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಎದುರಾಗ ಬಾರದು. ಈ ನಿಟ್ಟಿನಲ್ಲಿ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ನೀರಿನ ಅಭಾವ ಬಾರದಂತೆ ನೋಡಿ ಕೊಳ್ಳಲು ವಲಯ ವಾರು ಅಧಿಕಾರಿ ಗಳಿಗೆ ತಾಕೀತು ಮಾಡಿದರು. ನೀರಿನ ಬವಣೆ ಇರುವ 110 ಬಡಾವಣೆಗಳಲ್ಲಿ ಹೆಚ್ಚು ಅವಶ್ಯಕತೆ ಯಿರುವ ಕಡೆ ಕೊಳವೆ ಬಾವಿಗಳನ್ನು ಕೊರೆಯುವಂತೆ ಸೂಚಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next