Advertisement
ಮಾಧ್ಯಮಗಳ ಜತೆ ಮಾತನಾಡಿದ ಅವರು, ತಮ್ಮ ವಿರುದ್ಧ ದಾಖಲೆ ಬಿಡುಗಡೆ ಮಾಡಿದರೆ ಭಯ ಇಲ್ಲ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿ, ಅವರು ಯಾರಿಗೂ ಹೆದರಲ್ಲ. ದೇವೇಗೌಡರ ಕುಟುಂಬವನ್ನು ಬಿಟ್ಟು ಅವರು ಯಾರನ್ನು ಬೇಕಾದರೂ ಖರೀದಿ ಮಾಡುತ್ತಾರೆ. ದೇವೇಗೌಡರ ಕುಟುಂಬವನ್ನು ಖರೀದಿಸುವ ಶಕ್ತಿ ಅವರಿಗಿಲ್ಲ. ಆದರೆ, ಬಿಜೆಪಿಯ ದಿಲ್ಲಿಯ ನಾಯಕರನ್ನೇ ಖರೀದಿ ಮಾಡಿದ್ದರೂ ಅಚ್ಚರಿ ಇಲ್ಲ. ಯಾರನ್ನು ಬೇಕಾದರೂ ಅವರು ಖರೀದಿ ಮಾಡಬಹುದು, ಅವರಿಗೆ ಆ ಶಕ್ತಿ ಇದೆ ಎಂದು ಮಾರ್ಮಿಕವಾಗಿ ಹೇಳಿದರು.
ನೈಸ್ ಅಕ್ರಮಗಳ ದಾಖಲೆ ಶೀಘ್ರವೇ ಬಿಡುಗಡೆ ಮಾಡುತ್ತೇನೆ. ಸಿಎಂ ಅವರು ರೈತರ ಪರವಾಗಿ ಇದ್ದರೆ, ತತ್ಕ್ಷಣ ನೈಸ್ ಹೆಚ್ಚುವರಿ ಜಮೀನು ವಾಪಸ್ ಪಡೆದು ಮೂಲ ರೈತರಿಗೆ ನೀಡಿ ಎಂದರು. ಕಾಂಗ್ರೆಸ್ನ 30 ಶಾಸಕರು ಪಕ್ಷ ಬಿಡುವರು: ಎಚಿxಕೆ
ಬೆಂಗಳೂರು: ಕಾಂಗ್ರೆಸ್ ಪಕ್ಷದ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ. ಅದನ್ನು ಸರಿಪಡಿಸಿಕೊಳ್ಳಲು ಸಾಧ್ಯವಾಗದ ಕಾಂಗ್ರೆಸ್ನವರು ಆಪರೇಷನ್ ಹಸ್ತದ ಗುಲ್ಲು ಹಬ್ಬಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಸೆಳೆಯುತ್ತಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ನಮ್ಮ ಶಾಸಕರು ಪಕ್ಷ ಬಿಡುವ ಸಾಧ್ಯತೆ ಇಲ್ಲ ಎಂದರು.
Related Articles
ಕಾವೇರಿ ವಿಚಾರದ ಬಗ್ಗೆ ಚರ್ಚೆ ನಡೆಸಲು ಕರೆಯಲಾಗುವ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುವೆ. ಅಲ್ಲಿ ನಮ್ಮ ಪಕ್ಷದ ನಿಲುವನ್ನು ಸ್ಪಷ್ಟವಾಗಿ ಹೇಳಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.
Advertisement