Advertisement

ಟೊಳ್ಳು ಬೆದರಿಕೆಗೆ  ಯಾರೂ ಹೆದರಲ್ಲ: ಡಾ|ಸುಧಾಕರ್‌

11:57 PM Apr 13, 2022 | Team Udayavani |

ಚಿಕ್ಕಬಳ್ಳಾಪುರ: ಗುತ್ತಿಗೆದಾರ ಸಂತೋಷ್‌ ಅವರ ಸಾವಿನಲ್ಲಿ ರಾಜಕೀಯ ಬೆರೆಸಿ, ಸಚಿವ ಕೆ.ಎಸ್‌. ಈಶ್ವರಪ್ಪನವರ ಹಾಗೂ ರಾಜ್ಯ ಸರಕಾರದ ತೇಜೋವಧೆ ಮಾಡುವ ಪ್ರಯತ್ನವನ್ನು ಕಾಣದ ಕೈಗಳು ಮಾಡುತ್ತಿವೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಇಲ್ಲಿ ದಾಳವಾಗಿ ಬಳಕೆಯಾಗಿದ್ದಾರೆ. ಕಾಂಗ್ರೆಸ್‌ನವರ ಈ ರೀತಿಯ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗುತ್ತಿಗೆದಾರ ಮೃತರಾಗಿರುವುದಕ್ಕೆ ದುಃಖವಿದೆ. ಆದರೆ ಈ ಸಾವು ಏಕೆ ಸಂಭವಿಸಿದೆ ಎಂಬುದು ತನಿಖೆ ಆಗದೆಯೇ ಸಚಿವರ ರಾಜೀನಾಮೆ ಕೇಳುವುದು ಸರಿಯಲ್ಲ. ಈ ಪ್ರಕರಣದಲ್ಲಿ ರಾಜಕೀಯ ಷಡ್ಯಂತ್ರ ಕೂಡ ಬೇಕಿಲ್ಲ. ಕಾಂಗ್ರೆಸ್‌ನವರು ಎಷ್ಟು ಸತ್ಯ ಹರಿಶ್ಚಂದ್ರರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್‌ನವರು ಯಾವ ಇಲಾಖೆಯಲ್ಲಿ ಎಷ್ಟು ಭ್ರಷ್ಟಾಚಾರ ಮಾಡಿದ್ದಾರೆ ಎನ್ನುವ ಅಂಕಿ ಅಂಶಗಳನ್ನು ನಾವು ಕೂಡ ಕೊಡಬಹುದು ಎಂದರು.ಮಾಡುತ್ತಿದ್ದಾರೆ ಎಂದರು.

ಕಮಿಷನ್‌ ವಿಚಾರದಲ್ಲಿ ತಮ್ಮ ಹೆಸರನ್ನು ಎಳೆದು ತಂದಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ವೈಯಕ್ತಿಕವಾಗಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣಗಳ ಸಚಿವ ಡಾ| ಕೆ. ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ.

ಕೆಂಪಣ್ಣನವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅವರು ಪುರಾವೆ ಇರಿಸಿಕೊಂಡು ಸರಕಾರದ ವಿರುದ್ಧ ಆರೋಪ ಮಾಡಲಿ ಎಂದ ಸಚಿವರು, ಕೆಂಪಣ್ಣ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರನ್ನು ಕಪ್ಪುಪಟ್ಟಿಗೆ ಸೇರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.  ಸಂತೋಷ್‌ ಸಾವಿನ ಪ್ರಕರಣದ ಬಗ್ಗೆ ಸರಕಾರ ನಿಷ್ಪಕ್ಷಪಾತ ತನಿಖೆ ನಡೆಸಲಿದೆ ಎಂದೂ ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next