Advertisement

ಮೋದಿ ಕ್ಷಮೆಗೆ ಪಟ್ಟು; ಕಾಂಗ್ರೆಸ್ ವಿರುದ್ಧ ನಾಯ್ಡು ಕೆಂಡಾಮಂಡಲ

01:59 PM Dec 20, 2017 | Sharanya Alva |

ಚಿಕ್ಕಮಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ವಿರುದ್ಧ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚೋದಿತ ಆರೋಪ ಮಾಡಿದ್ದಕ್ಕೆ ಪ್ರತಿಯಾಗಿ ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ಸದಸ್ಯರು ರಾಜ್ಯಸಭೆಯಲ್ಲಿ ಬುಧವಾರ ತೀವ್ರ ಕೋಲಾಹಲ ನಡೆಸಿದ್ದಕ್ಕೆ ರಾಜ್ಯಸಭಾಧ್ಯಕ್ಷ ವೆಂಕಯ್ಯ ನಾಯ್ಡು ಕೆಂಡಾಮಂಡಲರಾದ ಘಟನೆ ನಡೆಯಿತು.

Advertisement

ಇದು ಸರಿಯಾದ ಕ್ರಮವಲ್ಲ. ಯಾರೊಬ್ಬರು ಕ್ಷಮೆ ಕೇಳಬೇಕಾದ ಅಗತ್ಯವಿಲ್ಲ, ಸದನದೊಳಗೆ ಏನೂ ನಡೆದಿಲ್ಲ. ಯಾವುದೇ ಹೇಳಿಕೆಯನ್ನು ಇಲ್ಲಿ ಕೊಟ್ಟಿಲ್ಲ ಎಂದು ರಾಜ್ಯಸಭಾಧ್ಯಕ್ಷ ನಾಯ್ಡು ಅವರು ಕಾಂಗ್ರೆಸ್ ಸದಸ್ಯ ವಿರುದ್ಧ ಈ ರೀತಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಲೋಕಸಭೆಯಲ್ಲೂ ಬುಧವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ಸದಸ್ಯರು ಬಾವಿ ಬಳಿ ತೆರಳಿ ತೀವ್ರ ಗದ್ದಲ ನಡೆಸಿದರು. ಬಳಿಕ ಪ್ರಶ್ನೋತ್ತರ ಅವಧಿಯಲ್ಲೂ ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದು ಕೋಲಾಹಲ ಎಬ್ಬಿಸಿದ್ದರು.

ಎರಡು ಬಾರಿಯೂ ಲೋಕಸಭಾ ಸ್ಪೀಕರ್ ಅವರು ಕಲಾಪವನ್ನು ಮುಂದೂಡಿದರು. ಗುಜರಾತ್ ನಲ್ಲಿ ಬಿಜೆಪಿಯನ್ನು ಸೋಲಿಸಲು ಪಾಕಿಸ್ತಾನ ಜತೆ ಕೈಜೋಡಿಸಿದ್ದ ಕಾಂಗ್ರೆಸ್ ಪಕ್ಷ ರಹಸ್ಯ ಸಭೆಯೊಂದನ್ನು ನಡೆಸಿತ್ತು, ಅದರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡಾ ಭಾಗವಹಿಸಿದ್ದರು ಎಂದು ಪ್ರಧಾನಿ ಮೋದಿ ಅವರು ಬಹಿರಂಗಸಭೆಯಲ್ಲಿ ಆರೋಪಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next