ನವದೆಹಲಿ: ಖಾಸಗಿ ಸೆಕ್ಯುರಿಟಿ ಗಾರ್ಡ್ ಅನ್ನು ಎಳೆದಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ನೋಯ್ಡಾ ಯುವತಿಯನ್ನು ಬಂಧಿಸಿರುವ ಘಟನೆ ನಡೆದಿದ್ದು, ಆಕೆಯನ್ನು ಕೋರ್ಟ್ ಗೆ ಹಾಜರುಪಡಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಇದನ್ನೂ ಓದಿ:ಮಹಾರಾಷ್ಟ್ರ : ಪೊಲೀಸ್ ವಾಹನದಲ್ಲೇ ಕುಳಿತು ಕೇಕ್ ಕತ್ತರಿಸಿದ ಕೊಲೆ ಆರೋಪಿ : ವಿಡಿಯೋ ವೈರಲ್
ಇತ್ತೀಚೆಗೆ ನೋಯ್ಡಾದ ಗ್ರ್ಯಾಂಡ್ ಒಮ್ಯಾಕ್ಸ್ ಸೊಸೈಟಿಯಲ್ಲಿ ಸಹ ನಿವಾಸಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದಿದ್ದ ಸ್ಥಳೀಯ ರಾಜಕೀಯ ಮುಖಂಡ ಶ್ರೀಕಾಂತ್ ತ್ಯಾಗಿ ಜೈಲುಪಾಲಾದ ಘಟನೆ ನಂತರ ಈ ವೈರಲ್ ವಿಡಿಯೋ ವಿಚಾರ ಬೆಳಕಿಗೆ ಬಂದಿತ್ತು ಎಂದು ವರದಿ ತಿಳಿಸಿದೆ.
ಖಾಸಗಿ ಸೆಕ್ಯುರಿಟಿ ಗಾರ್ಡ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಂತರ ಪೊಲೀಸರು ಭವ್ಯಾ ರಾಯ್ ಎಂಬಾಕೆ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿರುವುದಾಗಿ ವರದಿ ವಿವರಿಸಿದೆ.
ಜೇಪೇ ವಿಶ್ ಟೌನ್ ಸೊಸೈಟಿಯ ಪ್ರವೇಶ ದ್ವಾರದಲ್ಲಿ, ಸೆಕ್ಯುರಿಟಿ ಅನೂಪ್ ಕುಮಾರ್, ನಿಯಮದಂತೆ ಕಾರಿನ ಸಂಖ್ಯೆಯನ್ನು ನಮೂದಿಸಿಕೊಂಡು ನಂತರ ಗೇಟ್ ತೆರೆದಿದ್ದ. ಇದರಿಂದ ಆಕ್ರೋಶಗೊಂಡ ಭವ್ಯಾ, ಕುಮಾರ್ ಗೆ ಬೈಗುಳಗಳ ಸುರಿಮಳೆಗೈದಿದ್ದಳು. ಈ ಘಟನೆಯ ವಿಡಿಯೋ ವೈರಲ್ ಆದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.