Advertisement

ಸಿಎಂ ಸೇರಿದಂತೆ ವಿವಿಧ ಅಭ್ಯರ್ಥಿಗಳ ನಾಮಪತ್ರ

12:37 PM Apr 21, 2018 | |

ಮೈಸೂರು: ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ಅಭ್ಯರ್ಥಿ ಹಾಲಿ ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಕುಟುಂಬ ಸದಸ್ಯರು, ಅಪಾರ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಬೃಹತ್‌ ಮೆರವಣಿಗೆ, ಇಷ್ಟಾರ್ಥ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಶುಕ್ರವಾರವೂ ನಾಮಪತ್ರ ಸಲ್ಲಿಸಿದರು. 

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅಪಾರ ಬೆಂಬಲಿಗರೊಂದಿಗೆ ನಗರದ ನಜರ್‌ಬಾದ್‌ನಲ್ಲಿರುವ ತಾಲೂಕು ಕಚೇರಿಗೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಇದಕ್ಕೂ ಮುನ್ನ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ತಾಲೂಕು ಕಚೇರಿವರೆಗೂ ಸಾವಿರಾರು ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಮಿನಿ ವಿಧಾನಸೌಧದ ಕೊಠಡಿ ಸಂಖ್ಯೆ 7ರಲ್ಲಿ ಮಧ್ಯಾಹ್ನ 2.15ಕ್ಕೆ ಚುನಾವಣಾಧಿಕಾರಿ ಬಿ.ವೆಂಕಟೇಶ್‌ ಅವರಿಗೆ  2 ಸೆಟ್‌ ನಾಮಪತ್ರ ಸಲ್ಲಿಸಿದರು. 

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌, ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ, ಮುಖಂಡರಾದ ಮಾವಿನಹಳ್ಳಿ ಸಿದ್ದೇಗೌಡ, ಕೃಷ್ಣಮಾದೇಗೌಡ ಜತೆಗಿದ್ದರು.

ಶುಕ್ರವಾರ ಬೆಳಗ್ಗೆಯೇ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳೀಕ ತಮ್ಮ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿ, ಗ್ರಾಮದ ಸಿದ್ದರಾಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಅಲ್ಲಿಂದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ವಿಶೇಷ ಪೂಜೆ ಸಲ್ಲಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next