Advertisement
ನಾಮಪತ್ರ ಸಲ್ಲಿಕೆಗೆ ಮಾ. 26 ಕೊನೆಯ ದಿನಾಂಕವಾಗಿದ್ದು ಮಾ. 27ರಂದು ಪರಿಶೀಲನೆ ನಡೆಯಲಿದೆ. ಮಾ. 29 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ. ಎ. 18ರಂದು ಚುನಾವಣೆ, ಮೇ 23ರಂದು ಮತಎಣಿಕೆ ನಡೆಯಲಿದೆ.
ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದ್ದರೂ ಮಂಗಳವಾರದಿಂದ ಹೆಚ್ಚಿನ ತೀವ್ರತೆ ದೊರಕಲಿದೆ. ಸಮರ್ಪಕ ದಾಖಲೆಗಳಿಲ್ಲದೆ 50,000 ರೂ.ಗಿಂತ ಹೆಚ್ಚಿನ ನಗದು ಕೊಂಡೊಯ್ಯುವಂತಿಲ್ಲ. 10 ಲ.ರೂ.ಗಿಂತ ಹೆಚ್ಚಿನ ಮೊತ್ತ ಸಾಗಿಸಿದರೆ ಅದನ್ನು ಆದಾಯ ತೆರಿಗೆ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಜಾತ್ರೆ, ಯಕ್ಷಗಾನಕ್ಕೂ ನಿಯಮದ ಬಿಸಿ
ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿ ಸಭೆ ಸಮಾರಂಭಗಳಿಗೆ ಅನುಮತಿ ಪಡೆಯಬೇಕು. ಧ್ವನಿವರ್ಧಕದ ಅನುಮತಿ
ಯನ್ನು ಪೊಲೀಸ್ ಇಲಾಖೆಯಿಂದ ಪಡೆಯಬೇಕು. ಧ್ವನಿವರ್ಧಕವನ್ನು ಬೆಳಗ್ಗೆ 6ರಿಂದ ರಾತ್ರಿ 10ರ ವರೆಗೆ ಮಾತ್ರ ಉಪಯೋಗಿಸಲು ಅವಕಾಶವಿದೆ. ಇದು ಯಕ್ಷಗಾನಕ್ಕೂ ಅನ್ವಯವಾಗುತ್ತದೆ. ಜಾತ್ರೆಗೆ ಚುನಾವಣಾಧಿಕಾರಿಗಳ ಅನುಮತಿ ಅಗತ್ಯವಾಗಿದೆ.
Related Articles
ಚುನಾವಣೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ಪೊಲೀಸ್ ಕಮಿಷನರೆಟ್‌ಗೆ ಕೇಂದ್ರೀಯ
ಸಶಸ್ತ್ರ ಪೊಲೀಸ್ ಪಡೆಯ (ಸಿಎಪಿಎಫ್) 91 ಮಂದಿ ಮಹಿಳಾ ಜವಾನರು ಆಗಮಿಸಿದ್ದು, ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಮಹಿಳಾ ಜವಾನರು ಕಳೆದ ನಾಲ್ಕು ದಿನಗಳಿಂದ ಮಂಗಳೂರಿನ ವಿವಿಧ ಭಾಗಗಳಲ್ಲಿ ಪಥಸಂಚಲನ ನಡೆಸಿದ್ದಾರೆ.
Advertisement
ನಾಮಪತ್ರ ಸಲ್ಲಿಕೆ ಮಾ. 19ರಂದು ಆರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಜವಾನರು ಮತ್ತು ಪೊಲೀಸರು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಐದು ಮಂದಿಗೆ ಮಾತ್ರ ಅವಕಾಶನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ಅಥವಾ ಸೂಚಕರು ಸೇರಿ ಒಟ್ಟು ಐವರು ಉಪಸ್ಥಿತರಿರಬಹುದು. ಮಾಧ್ಯಮ ಪ್ರತಿನಿಧಿಗಳಿಗಳಿಗೆ ನಾಮಪತ್ರ ಸಲ್ಲಿಕೆಯ ವೀಡಿಯೋ ಹಾಗೂ ಛಾಯಾಚಿತ್ರಗಳನ್ನು ಜಿಲ್ಲಾ ಚುನಾವಣಾ ಶಾಖೆಯಿಂದಲೇ ಒದಗಿಸಿಕೊಡಲಾಗುವುದು ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.