Advertisement

Rajya Sabha: ನಾಮಪತ್ರ ಸಲ್ಲಿಕೆ ಮುಕ್ತಾಯ: ಹಲವರು ಅವಿರೋಧ ಆಯ್ಕೆ?

09:11 PM Feb 15, 2024 | Team Udayavani |

ನವದೆಹಲಿ: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಗಡುವು ಮುಕ್ತಾಯಗೊಂಡಿದ್ದು, ಅಭ್ಯರ್ಥಿಗಳ ಕಣದಲ್ಲಿರುವವರಲ್ಲಿ ಹೆಚ್ಚಿನವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪಕ್ಷಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಅಶೋಕ್‌ ಚೌಹಾಣ್‌ ಮತ್ತು ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಬಾರಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದಾರೆ.

Advertisement

ಫೆಬ್ರವರಿ 27ರಂದು ರಾಜ್ಯಸಭೆಯ 56 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಸ್ಥಾನಗಳಲ್ಲಿ ಉತ್ತರ ಪ್ರದೇಶ 10, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ತಲಾ 6, ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶದಲ್ಲಿ ತಲಾ 5, ಗುಜರಾತ್‌ ಮತ್ತು ಕರ್ನಾಟಕದಲ್ಲಿ ತಲಾ 4, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ ಮತ್ತು ಒಡಿಶಾದಲ್ಲಿ ತಲಾ 3, ಉತ್ತರಾಖಂಡ, ಛತ್ತೀಸ್‌ಗಢ, ಹರ್ಯಾಣ ಮತ್ತು ಹಿಮಾಚಲ ಪ್ರದೇಶಗಳಲ್ಲಿ ತಲಾ ಒಂದೊಂದು ಸ್ಥಾನಗಳು ಸೇರಿವೆ.

ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯುವಿಕೆಗೆ ಫೆಬ್ರವರಿ 20 ಕೊನೇ ದಿನವಾಗಿದ್ದು, ಫೆಬ್ರವರಿ 27ರಂದು ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5ರ ಬಳಿಕ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next