Advertisement

ನಾಮಪತ್ರ ಸಲ್ಲಿಕೆ ಭರಾಟೆ ಜೋರು

03:40 PM Aug 17, 2018 | |

ಚಿತ್ರದುರ್ಗ: ನಗರಸಭೆ ಚುನಾವಣೆಗೆ ಸ್ಪರ್ಧೆ ಬಯಸಿ ವಿವಿಧ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರರು ಜಿಲ್ಲಾ ಬಾಲಭವನದಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ನಗರಸಭೆ ಮಾಜಿ ಅಧ್ಯಕ್ಷ ಎಚ್‌.ಸಿ. ನಿರಂಜನಮೂರ್ತಿ ಎಂಟನೆ ವಾರ್ಡ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ, ಮತ್ತೋರ್ವ ಮಾಜಿ ಅಧ್ಯಕ್ಷ ಡಿ. ಮಲ್ಲಿಕಾರ್ಜುನ್‌ (ಪೊಲೀಸ್‌) 15ನೇ ವಾರ್ಡ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ. ಲೀಲಾಧರ ಠಾಕೂರ್‌ ಪಕ್ಷೇತರ ಅಭ್ಯರ್ಥಿಯಾಗಿ ಎಂಟನೇ ವಾರ್ಡ್‌ನಿಂದ, 21ನೇ ವಾರ್ಡ್‌ನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿ. ಶ್ರುತಿ, 12ನೇ ವಾರ್ಡನಿಂದ ಶಕೀಲಾಭಾನು, 25ನೇ ವಾರ್ಡ್‌ನಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಮಹಮ್ಮದ್‌ ಜೈನುಲ್ಲಾಬ್ದಿàನ್‌ ತಮ್ಮ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು.

Advertisement

ಬೆಳಿಗ್ಗೆಯಿಂದ ಬೀಳುತ್ತಿರುವ ಜಡಿಮಳೆಯನ್ನೂ ಲೆಕ್ಕಿಸದೆ ಅಭಿಮಾನಿಗಳು ರಮ್ಮ ವಾರ್ಡ್‌ಗಳ ಸ್ಪರ್ಧಾಳುಗಳನ್ನು ನಾಮಪತ್ರ ಸಲ್ಲಿಕೆ ವೇಳೆ ಹೆಗಲ ಮೇಲೆ ಎತ್ತಿಕೊಂಡು ಸಾಗಿ ಬೆಂಬಲ ವ್ಯಕ್ತಪಡಿಸುತ್ತಿದ್ದರು. ಅಂಬೇಡ್ಕರ್‌ ವೃತ್ತ ಸೇರಿದಂತೆ ವಿವಿಧೆಡೆ ಪಟಾಕಿ ಸಿಡಿಸಿ ಚುನಾವಣೆಯಲ್ಲಿ ಗೆದ್ದುಬಿಟ್ಟಿದ್ದಾರೆನೋ ಎನ್ನುವಂತೆ ಕುಣಿದು ಸಂಭ್ರಮಿಸುತ್ತಿದ್ದರು. ಮತ್ತೆ ಕೆಲವರು ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಾಮಪತ್ರ ಸಲ್ಲಿಕೆಗೆ ಹೊರಟರು. ಬಾಲಭವನದ ಸುತ್ತ ಬ್ಯಾರಿಕೇಡ್‌ಗಳನ್ನಿಟ್ಟು ಪೊಲೀಸರು ಜನಜಂಗುಳಿಯನ್ನು ನಿಯಂತ್ರಿಸಿದರು. ಒಬ್ಬ ಅಭ್ಯರ್ಥಿಯ ಜೊತೆಗೆ ನಾಲ್ವರನ್ನು ಮಾತ್ರ ಒಳಗೆ ಬಿಡಲಾಗುತ್ತಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next