ಇಸ್ಲಾಮಾಬಾದ್: ನ್ಯಾಯಾಧೀಶರಿಗೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಪಾಕಿಸ್ತಾನ ಸಿವಿಲ್ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.
ಇದರೊಂದಿಗೆ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಸಂಕಷ್ಟ ಮತ್ತೆ ಹೆಚ್ಚಾಗಿದೆ. ಕಾನೂನು ಹೋರಾಟಕ್ಕಾಗಿ ಜಿಲ್ಲಾ ಸೆಶನ್ ಕೋರ್ಟ್‌ಗೆ ಹಾಜರಾಗಿದ್ದ ಇಮ್ರಾನ್ ಖಾನ್, ಮಹಿಳಾ ಜಡ್ಜ್ ವಿರುದ್ಧ ಅಕ್ಷೇಪಿತ ಪದ ಬಳಕೆ ಮಾಡಿದ್ದಾರೆ. ಹೀಗಾಗಿ ಜಿಲ್ಲಾ ಸೆಶನ್ ಕೋರ್ಟ್ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಿದೆ.
ಇದರ ಬೆನ್ನಲ್ಲೇ ಲಾಹೋರ್ ಪೊಲೀಸರು ಇಮ್ರಾನ್ ಖಾನ್ ವಿರುದ್ದ ಹೊಸ ಪ್ರಕರಣವೊಂದನ್ನು ದಾಖಲಿಸಿಕೊಂಡಿದ್ದಾರೆ. ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್ ಪಕ್ಷದ ಕಾರ್ಯಕರ್ತನ ಸಾವಿನ ಪ್ರಕರಣ ಇದೀಗ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ವಿರುದ್ಧ ತಿರುಗಿ ಬಿದ್ದಿದ್ದು ಪಾಕ್ ಮಾಜಿ ಪ್ರಧಾನಿ ಹೈಕೋರ್ಟ್ ಮೊರೆ ಹೋಗಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ನರೇಂದ್ರ ಮೋದಿ ಅವರನ್ನು ಮುಗಿಸಿದರೆ ಭಾರತ…: ಎಸ್‌ಎಸ್ ರಾಂಧವಾ ವಿವಾದ