Advertisement

“ಕಟ್ಟಪ್ಪ”ಸೇರಿ 8 ತಮಿಳು ನಟರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

03:36 PM May 23, 2017 | Team Udayavani |

ಉದಕಮಂಡಲಂ: ಪತ್ರಕರ್ತರೊಬ್ಬರು ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ಸತತವಾಗಿ ಗೈರು ಹಾಜರಾಗುತ್ತಿದ್ದ ಖ್ಯಾತ ತಮಿಳು ನಟ ಸೂರ್ಯ, ಆರ್ ಶರತ್ ಕುಮಾರ್, ಬಾಹುಬಲಿಯ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ಸೇರಿದಂತೆ 8 ಮಂದಿ ವಿರುದ್ಧ ಊಟಿಯ ಜುಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮಂಗಳವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

Advertisement

ತಮಿಳು ಚಿತ್ರರಂಗದ ನಟಿಯರ ಮಾನಹಾನಿ ಮಾಡುವಂತಹ ಲೇಖನ ಪ್ರಕಟಿಸಿದ್ದ ತಮಿಳು ದೈನಿಕದ ವಿರುದ್ಧ 2009ರ ಅಕ್ಟೋಬರ್ 7ರಂದು ದಕ್ಷಿಣ ಭಾರತ ನಟರ ಅಸೋಸಿಯೇಶನ್(ನಾಡಿಗರ್ ಸಂಘಂ) ಚೆನ್ನೈನಲ್ಲಿ ಸಭೆ ನಡೆಸಿ ವಿರೋಧ ವ್ಯಕ್ತಪಡಿಸಿತ್ತು. ಈ ಸಭೆಯಲ್ಲಿ ಎಲ್ಲಾ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಊಟಿಯ ಅರೆಕಾಲಿಕ ಪತ್ರಕರ್ತರಾದ ಎಂ ರೋ಼ಝಾರಿಯೋ ದೂರು ದಾಖಲಿಸಿದ್ದರು.

ಪ್ರಕರಣದ ಕುರಿತಂತೆ 2011ರ ಡಿಸೆಂಬರ್ 18ರೊಳಗೆ ಕೋರ್ಟ್ ಗೆ ಹಾಜರಾಗಬೇಕೆಂದು ನಟರಾದ ಸೂರ್ಯ, ಸತ್ಯರಾಜ್, ಶರತ್ ಕುಮಾರ್, ಶ್ರೀಪ್ರಿಯಾ, ವಿಜಯ್ ಕುಮಾರ್, ಅರುಣ್ ವಿಜಯ್, ವಿವೇಕ್ ಹಾಗೂ ಚರಣ್ ಗೆ ನೋಟಿಸ್ ಜಾರಿ ಮಾಡಿತ್ತು. ಏನತ್ಮಧ್ಯೆ ತಮ್ಮ ಖುದ್ದು ಹಾಜರಾತಿಗೆ ವಿನಾಯ್ತಿ ನೀಡಬೇಕೆಂದು ಕೋರಿ ನಟರು ಮದರಾಸ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು.

2017ರ ಮೇ 15ರಂದು ಮತ್ತೆ ಪ್ರಕರಣದ ವಿಚಾರಣೆ ನಡೆದಾಗಲೂ ನಟರು ಕೋರ್ಟ್ ಗೆ ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಸೆಂಥಿಲ್ ಕುಮಾರ್ ರಾಜಾವೇಲ್ ಅವರು ಮಂಗಳವಾರ ಎಂಟು ಮಂದಿ ನಟರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next