Advertisement

ಕಾಶಪ್ಪನವರ್‌ಗೆ ಜಾಮೀನು ರಹಿತ ವಾರಂಟ್‌

01:54 AM Mar 14, 2019 | Team Udayavani |

ಬೆಂಗಳೂರು: ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ಪದೇಪದೆಆರೋಪಿತ ಜನಪ್ರತಿನಿಧಿಗಳು ಗೈರು ಹಾಜರಾಗುವುದಕ್ಕೆ ವಿಶೇಷ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕಿಡಿಕಾರಿದೆ.

Advertisement

2013ರ ವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ನೀಡಿದ್ದ ಸಮನ್ಸ್‌ನಂತೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‌ ಬುಧವಾರ ಜನಪ್ರತಿನಿಧಿಗಳವಿಶೇಷ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ, ಗೈರುಹಾಜರಾಗಿದ್ದರು. ಅವರ ಪರ ವಕೀಲರು, ಮಾಜಿ ಶಾಸಕರ ಸಂಬಂಧಿಕರು ಮೃತಪಟ್ಟಿರುವ ಕಾರಣ ಅವರ ಅಂತಿಮ ಸಂಸ್ಕಾರ ಕಾರ್ಯಕ್ಕೆ ತೆರಳಿದ್ದಾರೆ. ಹೀಗಾಗಿ, ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದರು.

ಈ ವೇಳೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು ವಿನಾಯಿತಿ ನೀಡಲು ನಿರಾಕರಿಸಿ
ಜಾಮೀನು ರಹಿತ ವಾರೆಂಟ್‌ ಜಾರಿ ಮಾಡಿ ವಿಚಾರಣೆಯನ್ನು ಮಾ.18ಕ್ಕೆ ಮುಂದೂಡಿದರು.

Advertisement

Udayavani is now on Telegram. Click here to join our channel and stay updated with the latest news.

Next