Advertisement
ಕೇಂದ್ರ ಸರ್ಕಾರದ ಹೊಸ ಸುಗ್ರೀವಾಜ್ಞೆ ಒಕ್ಕೂಟ ವ್ಯವಸ್ಥೆಗೇ ಸವಾಲಾಗಿ ಪರಿಣಮಿಸಿದೆ. ಬಿಜೆಪಿಯೇತರ ಪಕ್ಷಗಳು ರಾಜ್ಯಸಭೆಯಲ್ಲಿ ಒಗ್ಗಟ್ಟಾಗಿ ನಿಂತರೆ ರಾಜ್ಯಸಭೆಯಲ್ಲಿ ಅದಕ್ಕೆ ಸಂಬಂಧಿಸಿದ ವಿಧೇಯಕ ಚರ್ಚೆಗೆ ಬಂದಾಗ ಸೋಲಿಸಲು ಸಾಧ್ಯವಿದೆ ಎಂದು ಪವಾರ್ ಭೇಟಿಯ ಬಳಿಕೆ ಕೇಜ್ರಿವಾಲ್ ಹೇಳಿದ್ದಾರೆ. ಚುನಾಯಿತ ಸರ್ಕಾರದ ಅಧಿಕಾರವನ್ನು ರಕ್ಷಿಸಲೇಬೇಕಾಗಿದೆ, ಈ ನಿಟ್ಟಿನಲ್ಲಿ ಬೆಂಬಲ ಪಡೆದುಕೊಳ್ಳಲು ಕೇಜ್ರಿವಾಲ್ ಅವರು ಕಾಂಗ್ರೆಸ್, ಬಿಜು ಜನತಾ ದಳ ಸೇರಿದಂತೆ ಎಲ್ಲಾ ಪಕ್ಷಗಳನ್ನು ಭೇಟಿ ಮಾಡಬೇಕು ಎಂದು ಪವಾರ್ ಅಭಿಪ್ರಾಯಪಟ್ಟಿದ್ದಾರೆ.
ತಿಹಾರ್ ಜೈಲಿನಲ್ಲಿ ಇರುವ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರು ಗುರುವಾರ ಏಕಾಏಕಿ ಕುಸಿದು ಬಿದ್ದಿದ್ದಾರೆ. ಹೀಗಾಗಿ, ಅವರನ್ನು ದೀನ್‌ದಯಾಳ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ, ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಕೂಡಲೇ ಸರ್ಕಾರಿ ಸ್ವಾಮ್ಯದ ಲೋಕನಾಯಕ ಜಯಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಿಸಿ, ಅಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ವಾರದ ಅವಧಿಯಲ್ಲಿ ಮಾಜಿ ಸಚಿವರನ್ನು ಎರಡನೇ ಬಾರಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಜೈಲಿನ ಸ್ನಾನ ಗೃಹದಲ್ಲಿ ತಲೆಸುತ್ತಿನಿಂದ ಬಿದ್ದಿದ್ದರು. ಅವರು ಕೂಡಲೇ ಗುಣಮುಖರಾಗಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹಾರೈಕೆ ಮಾಡಿ ಟ್ವೀಟ್ ಮಾಡಿದ್ದಾರೆ. ಜತೆಗೆ ಪ್ರಧಾನಿ ಮೋದಿಯವರನ್ನು ಪರೋಕ್ಷವಾಗಿ ಉಲ್ಲೇಖೀಸಿ ಟೀಕಿಸಿದ್ದಾರೆ.”ಒಬ್ಬ ನಿರಂಕುಶವಾದಿ ಜನರಿಗಾಗಿ ಉತ್ತಮ ಕೆಲಸ ಮಾಡಿದ ವ್ಯಕ್ತಿಯನ್ನು ಹಿಂಸೆಗೆ ಗುರಿಮಾಡಿದ್ದಾರೆ. ದೇವರು ಎಲ್ಲವನ್ನೂ ವೀಕ್ಷಿಸುತ್ತಿದ್ದಾನೆ ಮತ್ತು ಒಳ್ಳೆಯದನ್ನು ಮಾಡಲಿದ್ದಾನೆ’ ಎಂದು ಬರೆದುಕೊಂಡಿದ್ದಾರೆ.