ಗಂಗಾವತಿ: ಹನುಮಮಾಲೆ ವಿಸರ್ಜನೆಗೆ ಕ್ಷಣಗಣನೆ ಆರಂಭವಾಗಿದ್ದು ಅಂಜನಾದ್ರಿಯಲ್ಲಿ ವ್ಯಾಪಾರಕ್ಕೆ ಅನ್ಯಧರ್ಮೀಯರಿಗೆ ಅವಕಾಶ ಬೇಡ ಎಂಬ ಬ್ಯಾನರ್ ಮತ್ತು ಬಂಟಿಂಗ್ಸ್ ರಾರಾಜಿಸುತ್ತಿವೆ.
ಅಂಜನಾದ್ರಿಗೆ ಹೋಗುವ ಮಾರ್ಗದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬ್ಯಾನರ್ ಗಳನ್ನು ಹಾಕಲಾಗಿದ್ದು, ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತಕ್ಕೆ ತಲೆ ನೋವಾಗಿದೆ.
ಹಿಂದೂಗಳಿಂದ…ಹಿಂದೂಗಳಿಗಾಗಿ…..ಹಿಂದೂಗಳಿಗೋಸ್ಕರ ಎಂಬ ಬ್ಯಾನರ್ ಹಾಕಲಾಗಿದೆ. ಈಗಾಗಲೇ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಗೆ ಜಾಗರಣ ವೇದಿಕೆ ಕಾರ್ಯಕರ್ತರು ಮನವಿ ಸಲ್ಲಿಸಿದ್ದು, ಪವಿತ್ರ ಕ್ಷೇತ್ರದಲ್ಲಿ ಮುಸ್ಲಿಂ ಹಾಗೂ ಕ್ರೈಸ್ತ ಧರ್ಮದವರಿಗೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿದ್ದಾರೆ.