Advertisement

ಸೊರಬ: ದೇವಸ್ಥಾನದ ಆವರಣದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸಲು ಅವಕಾಶ ನೀಡಬಾರದು; ಮನವಿ

04:27 PM Sep 12, 2022 | Kavyashree |

ಸೊರಬ: ತಾಲೂಕಿನ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದ ಆವರಣದಲ್ಲಿ ಹಿಂದೂಯೇತರರಿಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಪರ ಸಂಘಟನೆಗಳಿಂದ ಸೊರಬ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಎಚ್. ಎಸ್. ಶೋಭಾಲಕ್ಷ್ಮೀ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ಹಿರಿಯ ವಕೀಲ ಎಂ.ಕೆ. ಯೋಗೇಶ್ ಮಾತನಾಡಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯ್ದೆ 2002ರ ಪ್ರಕಾರ ಹಿಂದೂಯೇತರರು ಹಿಂದೂ ಧಾರ್ಮಿಕ ಕ್ಷೇತ್ರಗಳ ಆವರಣದಲ್ಲಿ ಮತ್ತು ಸುತ್ತಮುತ್ತ ವ್ಯಾಪಾರ ಮಾಡುವಂತಿಲ್ಲ ಎಂದು ಕಾಯ್ದೆ ಇದೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನದ ಆವರಣದಲ್ಲಿ ಹಿಂದೂಯೇತರರಿಗೆ ವ್ಯಾಪಾರ-ವಹಿವಾಟು ನಡೆಸಲು ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ತಾಲೂಕು ಆಡಳಿತ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಪುರಾಣ ಹಾಗೂ ಐತಿಹಾಸಿ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಉತ್ತರ ಕರ್ನಾಟಕ ಭಾಗದಲ್ಲಿ ಲಕ್ಷಾಂತರ ಭಕ್ತರಿದ್ದಾರೆ. ಹುಣ್ಣಿಮೆ, ಶುಕ್ರವಾರ, ಮಂಗಳವಾರ ಸೇರಿದಂತೆ ವಿಶೇಷ ದಿನಗಳಲ್ಲಿ ಸಾಗರೋಪಾದಿಯಲ್ಲಿ ಭಕ್ತ ಸಮೂಹ ಹರಿದುಬರುತ್ತದೆ. ಪ್ರಸ್ತುತ ದೇವರ ದರ್ಶನಕ್ಕೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಮತ್ತು ಸಂಜೆ 4 ರಿಂದ 6.30 ರವರೆಗೆ ಅವಕಾಶ ನೀಡಲಾಗಿದೆ. ಇದರಿಂದ ಭಕ್ತರಿಗೆ ಸಮಸ್ಯೆಯಾಗುತ್ತಿದ್ದು, ಪ್ರಸ್ತುತ ನಿಗದಿ ಮಾಡಿರುವ ಸಮಯವನ್ನು ಬದಲಿಸಿ ಬೆಳಗ್ಗೆ 8 ರಿಂದ ಸಂಜೆ 7 ಗಂಟೆಯ ವರೆಗೂ ಅವಕಾಶ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್‍ನ ಲೋಕೇಶ್, ರಾಘು ಗಜಮುಖ, ಪ್ರಮುಖರಾದ ಗುರು ಪ್ರಸನ್ನ ಗೌಡ, ಅರುಣ್ ಪುಟ್ಟನಹಳ್ಳಿ ಸೇರಿದಂತೆ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next