Advertisement
ಮಂಗಳವಾರ ಸಂಜೆ ನಗರದಲ್ಲಿ ಮಾಧ್ಯಮದವ ರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೈಗಾರಿಕೆಗಾಗಿ ಭೂಮಿ ಹಂಚಿಕೆಯಾದರೂ ಇದುವರೆಗೆ ಉದ್ಯಮ ಆರಂಭಿಸದಿರುವುದು, ಬೇರೆ ಉದ್ದೇಶಕ್ಕೆ ಬಳಸಿರುವುದು, ಖಾಲಿ ಬಿಟ್ಟಿರುವುದರ ಸಮೀಕ್ಷೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸಮೀಕ್ಷಾ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಟೌನ್‌ಶಿಪ್ ಆಗಬೇಕು ಎಂಬ ಬೇಡಿಕೆ ಹಿಂದಿನಿಂದಲೂ ಇತ್ತು. ಆದರೆ, ನಗರಾಭಿವೃದ್ಧಿ ಇಲಾಖೆ ಅದಕ್ಕೆ ಆಸ್ಪದ ನೀಡಿರಲಿಲ್ಲ. ನಗರಾಭಿವೃದ್ಧಿ ಸಚಿವರು ಹಾಗೂ ಇಲಾಖೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಟೌನ್‌ಶಿಪ್‌ಗೆ ಪ್ರೋತ್ಸಾಹ ನೀಡಲು ಒಪ್ಪಿಗೆ ಪಡೆಯಲಾಗಿದೆ. ಪೀಣ್ಯ, ದಾಬಸ್‌ಪೇಟೆ, ಹುಬ್ಬಳ್ಳಿ ಸೇರಿದಂತೆ ಈಗಾಗಲೇ ಕೈಗಾರಿಕೆ ಸ್ಥಾಪಿಸುವವರೇ ಟೌನ್ ಶಿಪ್ ಕೇಳುತ್ತಿದ್ದಾರೆ. ಪ್ರಾಥಮಿಕ ಹಂತದಿಂದಲೇ ಟೌನ್‌ಶಿಪ್ ಅಭಿವೃದ್ಧಿಗೆ ಕ್ರಮ ಕೈಗೊಂಡರೆ ಮಾದರಿ ಆಗಲಿದೆ. ಈ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
Advertisement
ಕೈಗಾರಿಕೆ ಆರಂಭಿಸದ ಭೂಮಿ ವಾಪಸ್
09:12 AM Jul 22, 2020 | Suhan S |
Advertisement
Udayavani is now on Telegram. Click here to join our channel and stay updated with the latest news.