Advertisement

ಮಾದರಿ ಕ್ಷೇತ್ರಕ್ಕಾಗಿ ಅಭಿವೃದ್ಧಿ ಕೈಗೊಳ್ಳಿ

01:40 PM May 30, 2023 | Team Udayavani |

ದೇವನಹಳ್ಳಿ: ಬಡವರ, ರೈತರ, ದೀನ-ದಲಿತರ, ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ತಮ್ಮ ಆಡಳಿತಾವಧಿಯಲ್ಲಿ ಉತ್ತಮ ಕೆಲಸ ಮಾಡುವಂತಾಗಬೇಕು. ಈಗಾಗಲೇ ತಮ್ಮ ಮೇಲೆ ಕ್ಷೇತ್ರದ ಜನರು ಸಾಕಷ್ಟು ನಿರೀಕ್ಷೆಯನ್ನಿಟ್ಟಿದ್ದಾರೆ ಎಂದು ಅನಿವಾಸಿ ಭಾರತೀಯ ರೊನಾಲ್ಡ್‌ ಕೋಲಾಸ್‌ ತಿಳಿಸಿದರು.

Advertisement

ತಾಲೂಕಿನ ಸಾದಹಳ್ಳಿಯಲ್ಲಿರುವ ಹಾಲಿಹುಡ್‌ ಟೌನಿನ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು.

ಸದೃಢವಾಗಿ ಪಕ್ಷ ಕಟ್ಟಬೇಕು: ದೇವನಹಳ್ಳಿ ಕ್ಷೇತ್ರಕ್ಕೆ ಇದುವರೆಗೂ ಮಂತ್ರಿ ಸ್ಥಾನಮಾನ ದೊರೆತಿರಲಿಲ್ಲ. ಇದೀಗ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಿದ್ದು, ನೀವು ಸಹ ಶಾಸಕರಾಗಿ, ಮಂತ್ರಿಸ್ಥಾನವನ್ನು ಪಡೆದುಕೊಂಡಿರುವುದು ಇತಿ ಹಾಸದ ಪುಟಗಳು ಸೇರುತ್ತವೆ. ಸ್ಥಳೀಯವಾಗಿ ದೇವನ ಹಳ್ಳಿ ತಾಲೂಕಿನಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳು ಇವೆ. ಹಿರಿಯ ರಾಜಕಾರಣಿಯಾಗಿರುವ ನೀವು ಜನರಿಗೆ ಸ್ಪಂದಿಸಿ ಅವರ ಸಮಸ್ಯೆಗಳಿಗೆ ಸಹಕಾರಿ ಯಾಗಿರಬೇಕು. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾ ವಣೆಯಲ್ಲಿಯೂ ಸಹ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಗಳನ್ನು ಗೆಲ್ಲಿಸಿಕೊಳ್ಳುವುದರ ಮೂಲಕ ಸದೃಢವಾಗಿ ಪಕ್ಷವನ್ನು ಕಟ್ಟಬೇಕು. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜನತೆ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡು ವುದರ ಮೂಲಕ ಕೆ.ಎಚ್‌. ಮುನಿಯಪ್ಪ ಅವರನ್ನು ಗೆಲ್ಲಿಸಿಕೊಂಡಿದ್ದಾರೆ. ಜನರ ಆಯ್ಕೆಯಂತೆ ಕ್ಷೇತ್ರದಲ್ಲಿ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವುದರ ಮೂಲಕ ಕ್ಷೇತ್ರವನ್ನು ಮಾದರಿಯನ್ನಾಗಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಸಿ.ಜಗನ್ನಾಥ್‌, ಕೋಲಾರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ರಾಮ್‌ಪ್ರಸಾದ್‌, ಜಿಪಂ ಮಾಜಿ ಸದಸ್ಯ ಕೆ.ಸಿ.ಮಂಜುನಾಥ್‌, ಕೆಪಿಸಿಸಿ ಸದಸ್ಯರಾದ ಚಿನ್ನಪ್ಪ, ವಿ.ಶಾಂತಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿ.ಪ್ರಸನ್ನಕುಮಾರ್‌, ಪ್ರಧಾನ ಕಾರ್ಯದರ್ಶಿ ಎಸ್‌.ನಾಗೇಗೌಡ, ಕುಂದಾಣ ಹೋಬಳಿ ಅಧ್ಯಕ್ಷ ಎಸ್‌.ಕೆ.ಕೋದಂಡರಾಮು, ಕಸಬಾ ಹೋಬಳಿ ಅಧ್ಯಕ್ಷ ಗೋಪಾಲಕೃಷ್ಣ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಕೆ.ಆರ್‌.ನಾಗೇಶ್‌, ಮುಖಂಡರಾದ ಶ್ರೀಧರ್‌, ಬಚ್ಚೇಗೌಡ, ಡಿ.ಆರ್‌.ನಾರಾಯಣಸ್ವಾಮಿ, ಡಿ.ವೆಂಕಟೇಶ್‌, ಭೂವನಹಳ್ಳಿ ಮುನಿರಾಜ್‌, ನಂದ ಕುಮಾರ್‌, ಮಂಜುನಾಥ್‌, ಡಿ.ಎನ್‌.ವೆಂಕಟೇಶ್‌, ಬಾಂಬೆ ನಾರಾಯಣಸ್ವಾಮಿ, ಅಂಬರೀಶ್‌, ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಇದ್ದರು.

ಒಗ್ಗಟ್ಟಿನಿಂದ ಪಕ್ಷ ಕಟ್ಟುವ ಕೆಲಸ: ಕೆಎಚ್‌ಎಂ: ಸಚಿವ ಕೆ.ಎಚ್‌.ಮುನಿಯಪ್ಪ ಮಾತನಾಡಿ, ಕ್ಷೇತ್ರದಲ್ಲಿ ನೆನೆಗುದ್ದಿಗೆ ಬಿದ್ದಿರುವ ಕೆಲಸಗಳಿಗೆ ಶೀಘ್ರದಲ್ಲಿಯೇ ಕಾರ್ಯಗತ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಯತೇತ್ಛ ಅನುದಾನವನ್ನು ತಂದು ಕ್ಷೇತ್ರವನ್ನು ಮಾದರಿ ಯನ್ನಾಗಿಸಲಾಗುತ್ತದೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜನತೆ ನನ್ನ ಮೇಲೆ ಇಟ್ಟಿರುವ ಅಭಿಮಾನವನ್ನು ಉಳಿಸಿಕೊಂಡು ಹೋಗುತ್ತೇನೆ. ಏನೇ ಸಮಸ್ಯೆ ಇದ್ದರೂ ಪಕ್ಷದ ಮುಖಂಡರ ಮುಂದಾ ಳತ್ವದಲ್ಲಿ ಸಮಸ್ಯೆ ಬಗೆಹರಿಸಲಾಗುತ್ತದೆ. ಮುಂಬರುವ ಚುನಾವಣೆಗೆ ಈಗಿನಿಂದಲೇ ಪಕ್ಷವನ್ನು ಸಂಘಟಿಸಿ ಜಿಪಂ, ತಾಪಂ ಚುನಾ ವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಕೊಳ್ಳಲು ಶ್ರಮಿಸಲಾಗುತ್ತದೆ. ಈಗಾಗಲೇ ಪಕ್ಷದಲ್ಲಿರುವ ಕೆಲವು ಮುಖಂಡರು ಒಗ್ಗೂಡದಿರುವುದು ನನ್ನ ಗಮನಕ್ಕೆ ಬಂದಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಪಕ್ಷ ಕಟ್ಟುವ ಕೆಲಸ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next