Advertisement

ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್‌ ದರ 65 ರೂ. ಇಳಿಕೆ

12:00 AM Apr 02, 2020 | Hari Prasad |

ಹೊಸದಿಲ್ಲಿ: ಕೋವಿಡ್ 19 ವೈರಸ್ ಲಾಕ್‌ಡೌನ್‌ ಸಂಕಷ್ಟದಲ್ಲಿ ಸಿಲುಕಿರುವ ಜನತೆಗೆ ಸಿಹಿಸುದ್ದಿಯಾಗಿ ಸಬ್ಸಿಡಿ ರಹಿತ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ ದರವನ್ನು 65 ರೂ. ಇಳಿಕೆ ಮಾಡಲಾಗಿದೆ. ಬುಧವಾರದಿಂದಲೇ ಪರಿಷ್ಕೃತ ದರ ಜಾರಿಯಾಗಿರುವುದಾಗಿ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ (ಐಒಸಿ) ತಿಳಿಸಿದೆ.

Advertisement

ಮಾರ್ಚ್‌ ತಿಂಗಳಲ್ಲಿ ಅಂತಾರಾಷ್ಟ್ರೀಯ ಕಚ್ಚಾ ತೈಲ ದರ ಶೇ.55ರಷ್ಟು ಇಳಿಕೆಯಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. 14.2 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್‌ ದರ ಬೆಂಗಳೂರಿನಲ್ಲಿ ಬುಧವಾರದಿಂದ 744 ರೂ. ಆಗಿದೆ. ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಸಿಲಿಂಡರ್‌ ದರ ಇಳಿಕೆ ಮಾಡಿರುವುದರಿಂದ ಗ್ರಾಹಕರ ಮೇಲಿನ ಹೊರೆ ತಗ್ಗಿಸಿದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next