Advertisement
ಜಿಲ್ಲೆಯ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದಲ್ಲಿ ಆಯೋಜಿಸಿದ್ದ 536ನೇ ಕನಕ ಜಯಂತ್ಯುತ್ಸವ ಮತ್ತು ಭಾವೈಕ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಮೊದಲು ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕು. ಜಾತಿ-ಧರ್ಮ ರಹಿತ ಮನುಷ್ಯ ಪ್ರೇಮವನ್ನೇ ಕನಕದಾಸರು ಜಗತ್ತಿಗೆ ನೀಡಿದರು. ಕನಕಗುರು ಪೀಠ ಸ್ಥಾಪಿಸುವಾಗ ಇದನ್ನು ಕುರುಬರ ಮಠ ಆಗಬೇಕು ಎಂದು ಇಚ್ಛಿಸಲೇ ಇಲ್ಲ. ಎಲ್ಲ ಶೋಷಿತ ಧರ್ಮಗಳ ಮಠ ಆಗಬೇಕು ಎನ್ನುವುದು ನಮ್ಮ ಉದ್ದೇಶ ಆಗಿತ್ತು ಎಂದರು.
ರಾಜಕಾರಣ ಎಂಬುದು ಸಮಾಜ ಸೇವೆಯಾಗಿದ್ದು, ಸೇವೆ ಮಾಡುವಾಗ ಯಾವುದೇ ಜಾತಿ, ಧರ್ಮ ನೋಡಬಾರದು. ಎಲ್ಲರ ಸೇವೆ ಮಾಡುವುದೇ ನಿಜವಾದ ಸಮಾಜಸೇವೆ. ಸಮಾಜದ ಕಟ್ಟಕಡೆಯ ಮನುಷ್ಯರನ್ನು ಗುರುತಿಸಿ ಅವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಬೇಕು. ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ರಾಜಕೀಯ ಪ್ರಜಾಪ್ರಭುತ್ವ ಸೌಧ ಉಳಿಯಲು ಸಾಧ್ಯ. ಇಲ್ಲದಿದ್ದರೆ ಭವಿಷ್ಯದ ದಿನಗಳಲ್ಲಿ ಆ ಕಟ್ಟಡ ಧ್ವಂಸವಾಗುತ್ತದೆ. ಆದ್ದರಿಂದ ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ, ಆರ್ಥಿಕ ಪ್ರಜಾಪ್ರಭುತ್ವದ ತಳಹದಿಯಾಗಿ ನಿಲ್ಲಬೇಕು ಎಂದರು. ನಿರಂಜನಾನಂದಪುರಿ ಶ್ರೀ, ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಬಿಜಾಪುರದ ಹಜರತ್ ಹಾಶಿಮ್ ಪೀರ್ ದರ್ಗಾದ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ, ಕರ್ನಾಟಕ ಧರ್ಮಪ್ರಾಂತದ ಧರ್ಮಗುರು ಡಾ|ಫಾ| ಅಲೊಧೀನ್ಸ್ ಫನಾಂìಡೀಸ್ ಯೇಸ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಇತರರು ಇದ್ದರು.
Related Articles
Advertisement