Advertisement

North Goa; ಬಾವಿಗೆ ಬಿದ್ದ ಚಿರತೆ..!; ಅರಣ್ಯಾಧಿಕಾರಿಗಳಿಂದ ರಕ್ಷಣೆ

02:34 PM Apr 07, 2023 | Team Udayavani |

ಪಣಜಿ:  ಉತ್ತರ ಗೋವಾದ ಶಿರಸೋಡ ಗ್ರಾಮದಲ್ಲಿ ಚಿರತೆ ಜನವಸತಿ ಪ್ರದೇಶದಲ್ಲಿ ತಿರುಗಾಡುತ್ತಿರುವುದು ಜನರಲ್ಲಿ ಆತಂಕ ಸೃಷ್ಠಿಸಿತ್ತು. ಇದೀಗ ಶಿರಸೋಡ ಗ್ರಾಮದಲ್ಲಿ ಜನವಸತಿ ಪ್ರದೇಶಕ್ಕೆ ಬಂದು ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ವಾಳಪೈ ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ಚಿರತೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಶಿರಸೋಡ ಗ್ರಾಮವು ಮಹಾದಾಯಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಇಲ್ಲಿನ ಗ್ರಾಮಕ್ಕೆ ವನ್ಯಜೀವಿಗಳು ಆಗಾಗ ಬರುತ್ತವೆ. ಗುರುವಾರ ರಾತ್ರಿಯೂ ಈ ಚಿರತೆ ಗ್ರಾಮಕ್ಕೆ ಬಂದು ಬಾವಿಯಲ್ಲಿ ಬಿದ್ದಿತ್ತು. ಶುಕ್ರವಾರ ಬೆಳಗ್ಗೆ ಕೆಲ ಗ್ರಾಮಸ್ಥರು ಇದನ್ನು ಗಮನಿಸಿದ್ದಾರೆ. ಅವರು ವಾಳಪೈ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಸಿ  ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ರಕ್ಷಿಸಿದ್ದಾರೆ. ಈ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:Andhra Pradesh ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆ

Advertisement

Udayavani is now on Telegram. Click here to join our channel and stay updated with the latest news.

Next